ಮೇ 27 ಪುಷ್ಪಾನಂದ ಫೌಂಡೇಶನ್ ವತಿಯಿಂದ 100% ಫಲಿತಾಂಶ ಬಂದ ಉಡುಪಿ ಕ್ಷೇತ್ರದ ಶಾಲೆ ಹಾಗೂ ಕಾಲೇಜುಗಳಿಗೆ ಅಭಿನಂದನಾ ಕಾರ್ಯಕ್ರಮ : ಯಶ್ ಪಾಲ್ ಸುವರ್ಣಾ

0
9

ಪುಷ್ಪಾನಂದ ಫೌಂಡೇಶನ್ ವತಿಯಿಂದ ಮೇ 27 ರಂದು ಸಂಜೆ 3.30ಕ್ಕೆ ಉಡುಪಿ ಬೀಡಿನಗುಡ್ಡೆ ರಸ್ತೆಯ ಇನ್ಫೋಸಿಸ್ ಯಕ್ಷಗಾನ ಕಲಾರಂಗ ಆಡಿಟೋರಿಯಂ ನಲ್ಲಿ 2025-26 ಸಾಲಿನ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಬಂದ ಉಡುಪಿ ವಿಧಾನಸಭಾ ಕ್ಷೇತ್ರದ ಶಾಲಾ ಕಾಲೇಜುಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಿರುವುದಾಗಿ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಪುಷ್ಪಾನಂದ ಫೌಂಡೇಶನ್ ವತಿಯಿಂದ ನೂರು ಶೇಕಡಾ ಫಲಿತಾಂಶ ಬಂದ 41ಶಾಲಾ ಕಾಲೇಜುಗಳಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಗುವುದು.

ಸಮಾರಂಭದಲ್ಲಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ವಿಶೇಷ ಮುತುವರ್ಜಿ ವಹಿಸಿದ ಶಿಕ್ಷಣ ಇಲಾಖೆಯ ಪರವಾಗಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಗುವುದು ಎಂದು ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here