ಬೆಂಗಳೂರು : ಬೇಸಿಗೆ ರಜೆಯ ಬಳಿಕ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲಾ ಆಡಳಿತ ಮಂಡಳಿಗಳು ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಹಲವೆಡೆ ಸ್ವಾಗತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಹಿನ್ನೆಲೆ ಶಾಲೆಗಳಲ್ಲಿ ಸ್ವಾಗತ ಕಾರ್ಯಕ್ರಮ, ಪಠ್ಯಪುಸ್ತಕ ವಿತರಣೆ ಹಾಗೂ ತರಗತಿ ಕೊಠಡಿಗಳ ಸ್ವಚ್ಛತಾ ಕಾರ್ಯ ಪೂರ್ಣಗೊಂಡಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ವಿದ್ಯಾರ್ಥಿಗಳು ಸಮಯ ಪಾಲನೆ ಮಾಡಿ ನಿಯಮಿತವಾಗಿ ಶಾಲೆಗೆ ಹಾಜರಾಗುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ.

