ಯಶಸ್ವಿಯಾದ ಶ್ರೀ ಗಾಯತ್ರಿ ಪೂಜೆ, ಉಪಾಸನೆ

0
18

ದಾವಣಗೆರೆಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ಈ ತಿಂಗಳ ಕಾರ ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಯಶಸ್ವಿಯಾಗಿ ನಡೆಯಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.

ಈ ತಿಂಗಳ ಹುಣ್ಣಿಮೆಯ ಪೂಜಾ ಸೇವೆಯನ್ನು ಬಿ.ಸತ್ಯನಾರಾಯಣಮೂತಿ ಮತ್ತು ಕುಟುಂಬ ಮತ್ತು ಶ್ರೀ ಗಾಯತ್ರಿ ಪರಿವಾರದ ಅಧ್ಯಕ್ಷರಾದ ವಾಸುದೇವ ಲಕ್ಷ್ಮ ಣ್ ರಾಯ್ಕರ್, ಗೌರವ ಅಧ್ಯಕ್ಷರಾದ ಡಾ|| ರಮೇಶ್ ಪಾಟೀಲ್ ದಂಪತಿಗಳು, ಗಾಯಿತ್ರಿ ಪರಿವಾರದ ಸಂಚಾಲಕರಾದ ಭಾವನ್ನಾರಾಯಣ, ಸತೀಶ್ ಆರ್.ಎಂ., ಮಹಾಲಕ್ಷ್ಮೀ ಗುರುಮೂರ್ತಿ, ಅಶ್ವತ್ಥನಾರಾಯಣ ಶೆಟ್ಟಿ, ಮುಕ್ತಾ ಶ್ರೀನಿವಾಸ ಪ್ರಭು, ವಿಕ್ರಂಜೈನ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here