ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತ ಸಾಬು ಅವರಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಡಿ. ಕಿರಣ್ ಚಂದ್ರ ಪುಷ್ಪಗಿರಿ

0
13

ಬೆಳ್ತಂಗಡಿ:ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಲೈಲಾ ಗ್ರಾಮದ ಹಿಂದೂ ಕಾರ್ಯಕರ್ತ ಮುಂಡೇಳುಮನೆಯ ಸಾಬು ಅವರನ್ನು ಸಮಾಜಸೇವಕ ಡಿ. ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಾಬು ಅವರು ಶೀಘ್ರ ಸಂಪೂರ್ಣವಾಗಿ ಗುಣಮುಖರಾಗಿ ಆರೋಗ್ಯದಿಂದ ಮನೆಗೆ ಮರಳಲಿ ಎಂದು ಶುಭ ಹಾರೈಸಿದ ಡಿ. ಕಿರಣ್ ಚಂದ್ರ ಪುಷ್ಪಗಿರಿ, ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದರು.

ಇದೇ ವೇಳೆ, ಕೆಲವು ದಿನಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ಅಶ್ವತ್ತಡಿ, ಕಾಯರ್ತಡ್ಕ ನಿವಾಸಿ ಶ್ರೀ ಗಣೇಶ್ ಗೌಡ ಅವರ ನಿವಾಸಕ್ಕೂ ಭೇಟಿ ನೀಡಿದ ಡಿ. ಕಿರಣ್ ಚಂದ್ರ ಪುಷ್ಪಗಿರಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತ ಗಣೇಶ್ ಗೌಡ ಅವರ ಅಗಲಿಕೆಯ ದುಃಖವನ್ನು ಹಂಚಿಕೊಂಡ ಅವರು, ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸಿದರು. ಅಲ್ಲದೆ, ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿ ಅಗತ್ಯ ನೆರವಿನ ಭರವಸೆ ನೀಡಿದರು.

ಅನಾರೋಗ್ಯದಲ್ಲಿರುವ ಕಾರ್ಯಕರ್ತನ ಆರೋಗ್ಯ ವಿಚಾರಣೆ, ಮೃತರ ಕುಟುಂಬಕ್ಕೆ ಸಾಂತ್ವನ

ಒಂದೆಡೆ ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಕಾರ್ಯಕರ್ತನ ಆರೋಗ್ಯ ವಿಚಾರಿಸಿ ಮಾನವೀಯತೆ ಮೆರೆದ ಡಿ. ಕಿರಣ್ ಚಂದ್ರ ಪುಷ್ಪಗಿರಿ, ಮತ್ತೊಂದೆಡೆ ಅಪಘಾತದಲ್ಲಿ ಮೃತಪಟ್ಟ ಗಣೇಶ್ ಗೌಡ ಅವರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ತಿಳಿಸಿದರಉ.

LEAVE A REPLY

Please enter your comment!
Please enter your name here