ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಜೂನ್ 3ರಿಂದ ಜೂನ್ 5ರವರೆಗೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸಮುದ್ರ ತೀರ ಪ್ರದೇಶದ ನಿವಾಸಿಗಳು ಹಾಗೂ ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇದೇ ವೇಳೆ, ಜೂನ್ 1ರಿಂದ ಜೂನ್ 4ರವರೆಗೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ 64.5 ಮಿ.ಮೀ.ದಿಂದ 115.5 ಮಿ.ಮೀ.ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಜೂನ್ 2ರಿಂದ 4ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ 5ರಂದು ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ, ಜೂನ್ 1ರಿಂದ ಮಳೆಗಾಲ ಮುಗಿಯುವವರೆಗೆ ಕಡಲ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಅಧಿಕ ಮಳೆ, ಗಾಳಿ ಹಾಗೂ ಗುಡುಗು-ಮಿಂಚಿನ ಸಂದರ್ಭಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಇರಲು, ಅನಗತ್ಯ ಪ್ರಯಾಣವನ್ನು ತಪ್ಪಿಸಲು ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಲು ಅಧಿಕಾರಿಗಳು ಸೂಚಿಸಿದ್ದಾ

