ಡಿಕೆ ಶಿವಕುಮಾರ್ ಮುಖ್ಯಮಂತ್ರಿ: ವಿಶೇಷ ಪೂಜೆ ಫಲಿಸಿದೆ ಎಂದ ಪ್ರಜ್ವಲ್ ಜೈನ್, ಬೆಂಬಲಿಗರಿಗೆ ಸಿಹಿ ವಿತರಣೆ

0
48

ಬೆಳ್ತಂಗಡಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ D. K. Shivakumar ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ಸಂತಸ ವ್ಯಕ್ತಪಡಿಸಿ ಬೆಂಬಲಿಗರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಒಂದು ವರ್ಷದ ಹಿಂದೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬ ಆಶಯದಿಂದ ಪ್ರಜ್ವಲ್ ಜೈನ್ ನಾವರ ಅವರು ಕೇರಳದ ಪ್ರಸಿದ್ಧ Madayi Kavu Templeಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ತಮ್ಮ ಪ್ರಾರ್ಥನೆಗೆ ಇದೀಗ ಫಲ ದೊರೆತಿದ್ದು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವುದು ಅಪಾರ ಸಂತಸ ತಂದಿದೆ ಎಂದು ಅವರು ತಿಳಿಸಿದರು.

ಈ ಹಿನ್ನೆಲೆಯಲ್ಲಿ ತಮ್ಮ ಬೆಂಬಲಿಗರು ಹಾಗೂ ಸ್ನೇಹಿತರೊಂದಿಗೆ ಸಂಭ್ರಮಾಚರಣೆ ನಡೆಸಿದ ಪ್ರಜ್ವಲ್ ಜೈನ್, ಸಿಹಿತಿಂಡಿ ವಿತರಿಸಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಜನಪರ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ವೇಗ ಪಡೆಯಲಿವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here