ಆಲಂಕಾರಿನ ಶ್ರೀ ದುರ್ಗಾಂಬಾ ಕಾಲೇಜಿನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

0
34

ಕಡಬ: ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು, ಆಲಂಕಾರಿನಲ್ಲಿ ಪ್ರೌಢಶಾಲಾ ವಿಭಾಗ ಮತ್ತು ಪದವಿ ಪೂರ್ವ ವಿಭಾಗದ ಪ್ರಾರಂಭೋತ್ಸವ ನಡೆಯಿತು. ಪದವಿ ಪೂರ್ವ ಹಾಗೂ ಪ್ರೌಢಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಶಾಲಾ ಪ್ರವೇಶ ದ್ವಾರದ ಬಳಿ ಶಿಕ್ಷಕಿಯರು ಆರತಿ ಬೆಳಗಿ ಸಿಹಿ ನೀಡಿ ಬರಮಾಡಿಕೊಂಡರು. ವಿದ್ಯಾರ್ಥಿಗಳನ್ನು ಶಾಲಾ ಬ್ಯಾಂಡ್ ನೊಂದಿಗೆ ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಿ ತರಗತಿಗೆ ಸ್ವಾಗತಿಸಲಾಯಿತು.

ಸಭಾಂಗಣದಲ್ಲಿ ವಿದ್ಯಾಧಿ ದೇವತೆಗೆ ಪುಷ್ಪಾರ್ಚನೆ ಮಾಡಿ ದೀಪ ಪ್ರಜ್ವಲಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ದಯಾನಂದ ರೈ ಮನವಳಿಕೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಜೀವನದಿಂದಲೇ ಶಿಸ್ತು ಬದ್ಧವಾದ ಶಿಕ್ಷಣ ಕ್ರಮವನ್ನು ರೂಡಿಸಿಕೊಂಡರೆ ಭವಿಷ್ಯದಲ್ಲಿ ವಿದ್ಯಾರ್ಥಿಯು ಉತ್ತಮ ಪ್ರಜೆಯಾಗಲು ಸಾಧ್ಯ ಎಂದು ಮನವರಿಕೆ ಮಾಡಿದರು. ಆಡಳಿತ ಮಂಡಳಿಯ ಸದಸ್ಯರಾದ ಮುತ್ತಪ್ಪ ಪೂಜಾರಿ ನೈಯಲ್ಗ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಆಡಳಿತಾಧಿಕಾರಿ ಶ್ರೀ ಪತಿರಾವ್ ಹೆಚ್. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರೌಢಶಾಲಾ ವಿಭಾಗದ ಮುಖ್ಯ ಗುರುಗಳು ನವೀನ್ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರು ಶ್ರೀಮತಿ ರೂಪಾ ಎಂ. ಟಿ ವಿದ್ಯಾರ್ಥಿಗಳಿಗೆ ಶುಭನುಡಿಗಳನ್ನಾಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು ಶ್ರೀನಾಥ್ ಗೌಡ ಕೇವಳ ಉಪಸ್ಥಿತರಿದ್ದರು. ಇಲಾಖೆಯಿಂದ ನೀಡಿದ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಪದವಿ ಪೂರ್ವ ವಿಭಾಗದ ವಿದ್ಯಾರ್ಥಿನಿ ಹಂಸಿನಿ ಸ್ವಾಗತಿಸಿ ,ವಿದ್ಯಾರ್ಥಿನಿ ರೂಪಿಕ ವಂದಿಸಿ ,ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯಾದ ಲಿಖಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here