ಕಂಬದಕೋಣೆ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಶೇ.100 ಫಲಿತಾಂಶ : ವಿದ್ಯಾರ್ಥಿಗಳಿಗೆ ಸನ್ಮಾನ

0
10

ಕಂಬದಕೋಣೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲೆಯು ಎಸ್‌ ಎಸ್‌ ಎಲ್‌ ಸಿ 2025 2026ನೇ ಶೈಕ್ಷಣಿಕ ವರ್ಷದಲ್ಲಿ ಪ್ರತಿಶತ 100 ಫಲಿತಾಂಶ ದಾಖಲಿಸಿತು.

ಇದರ ಪ್ರಯುಕ್ತ, ದಾಖಲೆ ಫಲಿತಾಂಶಕ್ಕೆ ಕಾರಣರಾದ ಸಂಸ್ಥೆಯ 130 ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ, ಸಂಸ್ಥೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅರುಣ ಹೆಬ್ಬಾರ, ಇವರು ಸಂಸ್ಥೆಯ ಎಲ್ಲಾ ಶಿಕ್ಷಕರನ್ನು ಅಭಿಮಾನದಿಂದ, ಗೌರವದಿಂದ ಸನ್ಮಾನಿಸಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.

ವೇದಿಕೆಯಲ್ಲಿ ಸಂಸ್ಥೆಯ ವೈಸ್ ಪ್ರಿನ್ಸಿಪಾಲ ಚಿತ್ರ ಬಿ. ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದೈಹಿಕ ವಿಜಯ್‌ ಕುಮಾರ್‌ ಉಪಸ್ಥಿತರಿದ್ದರು. ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪೋಷಕರು, ಪ್ರಭಾರ ಪ್ರಿನ್ಸಿಪಾಲ ಅಶೋಕ ನಾಯಕ ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here