ಸ್ಯಾಂಡಲ್‌ವುಡ್ ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಕು..!

0
71

ಬೆಂಗಳೂರು : ಕನ್ನಡ ಚಿತ್ರರಂಗದ ನಟಿ ಹಾಗೂ ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿರುವ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯಾದ ನಾಲ್ಕು ವರ್ಷಗಳ ಬಳಿಕ ಅವರು ಮತ್ತು ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

2022ರಲ್ಲಿ ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿ ಸಂತೋಷದಿಂದ ಜೀವನ ಸಾಗಿಸುತ್ತಿದ್ದರು. ಆದರೆ ಇದೀಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಸುದ್ದಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ದಂಪತಿಯ ನಡುವೆ ಮನಸ್ತಾಪ ಉಂಟಾಗಲು ಕಾರಣವೇನು ಎಂಬ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಈ ಕುರಿತು ಇಬ್ಬರೂ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವಿಚ್ಛೇದನ ಅರ್ಜಿಗೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯಲ್ಲಿ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ. ಇದೇ ವೇಳೆ ಶುಭಾ ಪೂಂಜಾ ಅವರು ತಮ್ಮ ಸಾಮಾಜಿಕ ಜಾಲತಾಣಗಳಿಂದ ಪತಿಯೊಂದಿಗಿನ ಫೋಟೋಗಳನ್ನು ತೆಗೆದುಹಾಕಿರುವುದೂ ಗಮನ ಸೆಳೆದಿದೆ.

ಶುಭಾ ಪೂಂಜಾ ಅವರು ಕನ್ನಡದ ಮೊಗ್ಗಿನ ಮನಸ್ಸು’ ಚೆಲುವೆ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದರು. ಅಲ್ಲದೆ Bigg Boss Kannada Season 8 ಕಾರ್ಯಕ್ರಮದಲ್ಲೂ ಭಾಗವಹಿಸಿ ವೀಕ್ಷಕರ ಗಮನ ಸೆಳೆದಿದ್ದರು.

LEAVE A REPLY

Please enter your comment!
Please enter your name here