ಅಳದಂಗಡಿ : ಉಚಿತ ವೈದ್ಯಕೀಯ, ನೇತ್ರ ತಪಾಸಣಾ ,ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

0
33

ಅಳದಂಗಡಿ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಳದಂಗಡಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರವನ್ನು ದಿನಾಂಕ 07-06-2026ನೇ ಆದಿತ್ಯವಾರ ಪೂರ್ವಾಹ್ನ ಸಮಯ 9.30ರಿಂದ ಅಪರಾಹ್ನ 12.30 ರವರೆಗೆ ಶ್ರೀ ಗುರು ಸಭಾ ಭವನ ಅಳದಂಗಡಿ ಇಲ್ಲಿ ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಪರಿಗಣಿಸಲ್ಪಟ್ಟ÷

ವಿಶ್ವ ವಿದ್ಯಾಲಯ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ ,ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯರ ತಂಡದವರಿAದ ಕಣ್ಣಿನ ತಪಾಸಣೆ, ಮಧುಮೇಹ ತಪಾಸಣೆ, ಬಿ. ಪಿ ತಪಾಸಣೆ, ದಂತ ತಪಾಸಣೆ ಮತ್ತು ಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಬಳಂಜ, ಜೆಸಿಐ ಬೆಳ್ತಂಗಡಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಶಿರ್ಲಾಲು, ಹಾಗೂ ಯುವ ಶಕ್ತಿ ನಾವರ ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಗಿದೆ.

ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here