ಅಳದಂಗಡಿ : ಜೂ.14 ಉಚಿತ ಪುಸ್ತಕ ವಿತರಣೆ, ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ – ಮುಖ್ಯ ಅತಿಥಿಯಾಗಿ ಭಾರತೀಯ ಕಬಡ್ಡಿ ತಂಡದ ನಾಯಕ ಪವನ್ ಸೆಹ್ರಾವತ್

0
57

ಅಳದಂಗಡಿ : ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ (ರಿ) ಅಳದಂಗಡಿ ಹಾಗೂ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ವತಿಯಿಂದ ಜೂನ್ 14ರಂದು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ವರ್ಷಂಪ್ರತಿಯಂತೆ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಇದರೊಂದಿಗೆ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ (ರಿ) ಅಳದಂಗಡಿ ಸಮಾಜ ಸೇವಾ ಸಂಘಟನೆಯ ಸಹಕಾರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಕೂಡ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವು ಜೂನ್ 14, 2026 ರಂದು ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಅಳದಂಗಡಿಯ ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಅರ್ಜುನ ಪ್ರಶಸ್ತಿ ಪುರಸ್ಕೃತರು ಹಾಗೂ ಭಾರತೀಯ ಕಬಡ್ಡಿ ತಂಡದ ನಾಯಕ ಪವನ್ ಸೆಹ್ರಾವತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭಾರತೀಯ ಕಬಡ್ಡಿ ಕ್ಷೇತ್ರದ ದಿಗ್ಗಜ ಆಟಗಾರರಾಗಿರುವ ಅವರ ಉಪಸ್ಥಿತಿಯಿಂದ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಸಿಗಲಿದೆ.

ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಪುಸ್ತಕ ವಿತರಣೆ, ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದ ಸದುಪಯೋಗ ಪಡೆಯುವಂತೆ ಆಯೋಜಕರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here