ಕೊಡಗಿನಲ್ಲಿ ಕಾಡಾನೆ ಅಟ್ಟಹಾಸ : ನಿವೃತ್ತ ಐಜಿಪಿ ಪತ್ನಿ ಬಲಿ..!

0
21

ಪೊನ್ನಂಪೇಟೆ : ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷದ ಘಟನೆಗಳು ಹೆಚ್ಚುತ್ತಿರುವ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿಯ ಪತ್ನಿ ಬಲಿಯಾದ ದುರ್ಘಟನೆ ನಡೆದಿದೆ.

ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆ ಗ್ರಾಮದಲ್ಲಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ನಿವೃತ್ತ ಐಜಿಪಿ ಅಣ್ಣಳಮಾಡ ಸುನೀಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ಮೃತ ದುರ್ದೈವಿ.

ಮಾಹಿತಿಯಂತೆ, ಸಂಧ್ಯಾ ಅವರು ಕುಟುಂಬ ಸಮೇತರಾಗಿ ನಿನ್ನೆಯಷ್ಟೇ ದೆಹಲಿಯಿಂದ ಸ್ವಗ್ರಾಮಕ್ಕೆ ಆಗಮಿಸಿದ್ದರು. ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ತಮ್ಮ ಸ್ವಂತ ಎಸ್ಟೇಟ್‌ಗೆ ತೆರಳಿದ್ದ ಸಂದರ್ಭದಲ್ಲಿ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.

ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಸಂಧ್ಯಾ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಎಸ್ಟೇಟ್‌ನ ಕೆಲ ಕಾರ್ಮಿಕರೂ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here