ಜೂ. 12 ರಂದು ಕಲಾಕುಂಚದಿಂದ ಉಚಿತ ಯೋಗ ಶಿಬಿರ ಉದ್ಘಾಟನೆ

0
15

ದಾವಣಗೆರೆ : ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ಜೂನ್ 12 ರಂದು ಶುಕ್ರವಾರ ಸಂಎ 5 ಗಂಟೆಗೆ ನಗರದ ಸಿದ್ದವೀರಪ್ಪ ಬಡಾವಣೆಯ ಯಗಟಿ ಮಲ್ಲಿಕಾರ್ಜುನ ನಿಲಯದ ಸಭಾಂಗಣದಲ್ಲಿ ಉಚಿತ ಯೋಗ ಶಿಬಿರ ಉದ್ಘಾಟನೆಯಾಗಲಿದೆ ಎಂದು ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.

ಸಮಾರಂಭದ ಉದ್ಘಾಟನೆಯನ್ನು ಶ್ರೀ ಅಮೃತೇಶ್ವರಿ ಅಷ್ಟಾಂಗ ಯೋಗ ಕೇಂದ್ರದ ಸಂಸ್ಥಾಪಕರು, ಯೋಗ ಶಿಕ್ಷಕರಾದ ಕೆ. ಕರಿಬಸಪ್ಪ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಲಲಿತಾ ಕಲ್ಲೇಶ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷö್ಮಣ್ ರಾಯ್ಕರ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಆಗಮಿಸಲಿದ್ದಾರೆ. ಯೋಗ ಶಿಕ್ಷಕಿಯರಾದ ಶ್ರೀಮತಿ ಲೀಲಾ ಸುಭಾಶ್, ಸಂಧ್ಯಾ ಶ್ರೀನಿವಾಸ್ ಗೌರವ ಉಪಸ್ಥಿತರಿರುತ್ತಾರೆ.

ಈ ಉಚಿತ ಯೋಗ ಶಿಬಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕಾಗಿ ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಪ್ರಧಾನ ಕಾರ್ಯದರ್ಶಿ ಸುಮಾ ಏಕಾಂತಪ್ಪ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here