ಮುದ್ರಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

0
7

ಹೆಬ್ರಿ : ಪರಿಸರವನ್ನು ಸ್ವಚ್ಛವಾಗಿಡುವುದು ಎಲ್ಲರ ಕರ್ತವ್ಯ. ಪ್ರಕೃತಿ ನಮಗೆ ನೀಡಿದ ಎಲ್ಲ ವಸ್ತುಗಳನ್ನು ಕಾಪಾಡಿಕೊಂಡು ಪರಿಸರ ಸ್ನೇಹಿ ಜೀವನ ಕ್ರಮಗಳನ್ನು ಅಳವಡಿಸಿಕೊಂಡು ಭೂಮಿಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ದರಾಗೋಣ. ನಮ್ಮ ಸುತ್ತಮುತ್ತಲೂ ಆದಷ್ಟು ಗಿಡಗಳನ್ನು ನೆಟ್ಟು ಪೋಷಣೆ ಮಾಡುವಲ್ಲಿ ಪ್ರಯತ್ನಿಸೋಣ ಎಂದು ಮುದ್ರಾಡಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಹೇಳಿದರು.

ಅವರು ತಮ್ಮ ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಕಲ್ಪನಾ ಪರಿಸರ ಸಂಫದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಾದ ಗಗನ್, ಶೋಭಿತ್, ಸಾನ್ವಿತ್ ಇವರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಇಕೋ ಕ್ಲಬ್ ಮಾರ್ಗದರ್ಶಿ ಶಿಕ್ಷಕಿ ಶ್ಯಾಮಲಾ ಕಾರ್ಯಕ್ರಮ ನಿರೂಪಿಸಿ, ಮಹೇಶ್ ನಾಯ್ಕ್ ವಂದಿಸಿದರು. ಶಾಲಾ ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here