ವಿದ್ಯಾರ್ಥಿಗಳ ಪರಿಶ್ರಮಕ್ಕೆ ಫಲ: ಕೆಸಿಇಟಿ 2026ರಲ್ಲಿ ವಿವೇಕಾನಂದ ಕಾಲೇಜಿನ ಸಾಧನೆ

0
7

ಪುತ್ತೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇತ್ತೀಚೆಗೆ ಪ್ರಕಟಿಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2026ರ ಫಲಿತಾಂಶದಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಇಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿ ವಿಶಾಲ್ ಪಿ. ಅವರು 194ನೇ ರ್ಯಾಂಕ್ ಪಡೆದು ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದು, ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಬಾರಿಯ ಕೆಸಿಇಟಿ ಫಲಿತಾಂಶದಲ್ಲಿ ಅತ್ಯಧಿಕ ರ್ಯಾಂಕ್‌ಗಳು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪಾಲಾಗಿವೆ.

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಪೈಕಿ ಸನ್ನಿಧಿ ಕಲ್ಲೂರಾಯ ಅವರು ಬಿಪಿಒ ವಿಭಾಗದಲ್ಲಿ 606ನೇ ರ್ಯಾಂಕ್, ವೈಭವಿ ಎಸ್. ಕೆ. ಅವರು ಬಿಪಿಟಿ, ಡಿ.ಫಾರ್ಮ್ ಹಾಗೂ ಬಿ.ಎಸ್‌ಸಿ. ಎ.ಎಚ್‌.ಸಿ. ವಿಭಾಗಗಳಲ್ಲಿ 3166ನೇ ರ್ಯಾಂಕ್, ಹಾಗೂ ಕುಮಾರ್ ಆರ್. ಅವರು ಬಿಪಿಒ ವಿಭಾಗದಲ್ಲಿ 3712ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಇದಲ್ಲದೆ, 5000 ರ್ಯಾಂಕ್‌ಗಳೊಳಗೆ ಸುಮಾರು 32 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದು, ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.

ಈ ಸಾಧನೆ ಮಾಡಿದ ಎಲ್ಲ ವಿದ್ಯಾರ್ಥಿಗಳನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here