ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 3,991 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆರಂಭ..!

0
52

ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಯುವಕ-ಯುವತಿಯರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿ ಸುದ್ದಿ ನೀಡಿದೆ. ರಾಜ್ಯದಾದ್ಯಂತ ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil Police Constable) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಜೂನ್ 10ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 3ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು ಹುದ್ದೆಗಳ ಪೈಕಿ 596 ಹುದ್ದೆಗಳು ಕಲ್ಯಾಣ ಕರ್ನಾಟಕ (HK) ಮೀಸಲಾತಿಗೆ ಹಾಗೂ 3,395 ಹುದ್ದೆಗಳು ಉಳಿಕೆ ಮೂಲ ವೃಂದ (Non-HK) ಕೋಟಾಕ್ಕೆ ಮೀಸಲಾಗಿವೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಈ ಕೆಳಗಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು:

ಆಧಾರ್ ಕಾರ್ಡ್
ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪದವಿ/ಪಿಯುಸಿ ಪ್ರಮಾಣಪತ್ರ
ಎಸ್‌ಎಸ್‌ಎಲ್‌ಸಿ ಅಥವಾ ಜನ್ಮ ದಿನಾಂಕ ದೃಢೀಕರಣ ದಾಖಲೆ
ಮಾಜಿ ಸೈನಿಕರ ಮೀಸಲಾತಿ ಸಂಬಂಧಿತ ದಾಖಲೆಗಳು (ಅನ್ವಯಿಸಿದರೆ)
ಜಾತಿ ಮತ್ತು ಒಳಮೀಸಲಾತಿ ಪ್ರಮಾಣಪತ್ರ
ಗ್ರಾಮೀಣ ಮೀಸಲಾತಿ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ (GM ಅಭ್ಯರ್ಥಿಗಳಿಗೆ ಗ್ರಾಮೀಣ ಕೋಟಾ ಅನ್ವಯಿಸಿದರೆ)
ಕನ್ನಡ ಮಾಧ್ಯಮ ಪ್ರಮಾಣಪತ್ರ
ವಿಶೇಷ ಚೇತನರ (PH) ಪ್ರಮಾಣಪತ್ರ
ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ಅನಕ್ಷೇಪಣಾ ಪ್ರಮಾಣಪತ್ರ (NOC)
ಫೋಟೋ ಮತ್ತು ಸಹಿ

ಅರ್ಜಿಯೊಂದಿಗೆ ಅಪ್ಲೋಡ್ ಮಾಡುವ ಇತ್ತೀಚಿನ ಭಾವಚಿತ್ರ ಹಾಗೂ ಸಹಿ 50 KB ಒಳಗೆ ಇರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಆರಂಭ: ಜೂನ್ 10, 2026
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 3, 2026

ಅಭ್ಯರ್ಥಿಗಳು ಕೊನೆಯ ಕ್ಷಣದ ಗಡಿಬಿಡಿಯನ್ನು ತಪ್ಪಿಸಲು ತಮ್ಮ ಆರ್‌ಡಿ ಸಂಖ್ಯೆ, ಪ್ರಮಾಣಪತ್ರಗಳು ಹಾಗೂ ಇತರೆ ದಾಖಲೆಗಳನ್ನು ಮುಂಚಿತವಾಗಿ ಪರಿಶೀಲಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here