ದಾವಣಗೆರೆ : ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಆಯೋಜಿಸಿದ್ದ ಜೋತಿಷ್ಯ ಕೋರ್ಸ್‌ಗಳ ಫಲಿತಾಂಶ ಪ್ರಕಟವಾಗಿದ್ದು, ದಾವಣಗೆರೆಯ ಭಾಸ್ಕರಾಚಾರ್ಯ ಜ್ಯೋತಿರ್ವಿದ್ಯಾ ಪ್ರತಿಷ್ಠಾನದ ವಿದ್ಯಾರ್ಥಿನಿ ಶಾರದಾ ಡಿ.ಆರ್. (ಶೇ 94.40) ಅವರು ಜೋತಿಷ್ಯ ಅಡ್ವಾನ್ಸ್ ಡಿಪ್ಲೊಮಾದಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ.

