ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ನಿಧನ..!

0
39

ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ಪುಣಿಕೆದಡಿ ನಿವಾಸಿ ವಸಂತ ಗೌಡ (48) ಅವರು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

ಜೂನ್ 4ರಂದು ಅವರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ. ಕುಟುಂಬದ ಮಾಹಿತಿ ಪ್ರಕಾರ, ಸುಮಾರು ಹತ್ತು ವರ್ಷಗಳ ಹಿಂದೆ ಪತ್ನಿ ಮತ್ತು ಪುತ್ರ ತವರು ಮನೆಗೆ ತೆರಳಿದ್ದು, ಬಳಿಕ ವಸಂತ ಗೌಡರು ಒಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ವೈಯಕ್ತಿಕ ಜೀವನದ ಸಂಕಷ್ಟಗಳಿಂದ ಅವರು ಮಾನಸಿಕವಾಗಿ ನೊಂದಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಈ ಸಂಬಂಧ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here