ಕಾರು ನೇರವಾಗಿ ಕಂದಕಕ್ಕೆ; ಕ್ಷಣಾರ್ಧದಲ್ಲಿ ನಡೆದ ಭೀಕರ ಅಪಘಾತ..!

0
121

ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಮಡಿಕೇರಿ–ಮೂರ್ನಾಡು ರಸ್ತೆಯಲ್ಲಿ ನಡೆದಿದೆ.

ಮೂರ್ನಾಡು ಕಡೆಯಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ವಾಹನಕ್ಕೆ ಭಾರೀ ಹಾನಿಯಾಗಿದೆ.

ಅಪಘಾತದ ವೇಳೆ ಕಾರಿನಲ್ಲಿದ್ದ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಡಿಕೇರಿ ನಗರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here