ಮಹಾಲಕ್ಷ್ಮೀ ಶೆಣೈಗೆ ಕೇಂದ್ರ ಸಂಗೀತ ಅಕಾಡೆಮಿ ಪುರಸ್ಕಾರ

0
23

ಉಡುಪಿ: ಕಾರ್ಕಳದ ಸಂಗೀತ ವಿದುಷಿ ಮಹಾಲಕ್ಷ್ಮೀ ಶೆಣೈ ಅವರು ಕೇಂದ್ರ ಸಂಗೀತ ನಾಟಕ ಅಕಾಡೆಮಿಯ 2024-25ನೇ ಸಾಲಿನ ಉಸ್ತಾದ್​ ಬಿಸ್ಮಿಲ್ಲಾ ಖಾನ್​ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಅಕಾಡೆಮಿ ಪ್ರಶಸ್ತಿ ಗಳಿಸಿದ ಮೊದಲ ಪ್ರತಿಭೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಅವರ ಸಾಧನೆಗಾಗಿ ಈ ಪ್ರಶಸ್ತಿ ಲಭಿಸಿದೆ. ಇವರು ಸಂಗೀತ ಲೋಕದ ದಿಗ್ಗಜ ಪಂಡಿತ್​ ವಿಶ್ವಮೋಹನ್​ ಭಟ್​ ಶಿಷ್ಯೆಯಾಗಿದ್ದು, ಕರ್ನಾಟಕ ಶಾಸ್ತ್ರೀಯ ಸಂಗೀತದ ಜತೆಗೆ ಭರತನಾಟ್ಯದಲ್ಲಿ ಪ್ರಾವಿಣ್ಯತೆ ಪಡೆದಿದ್ದಾರೆ.

ಆಕಾಶವಾಣಿ ಎ ಗ್ರೇಡ್​ ಕಲಾವಿದೆಯಾಗಿದ್ದಾರೆ. ಎಂಎಸ್​ಡಬ್ಲ್ಯು, ಎಂಎಸ್​ ಪದವಿಧರೆಯಾಗಿರುವ ಇವರು ಉದಯಪುರ ಎಂಎಲ್​ಸಿ ವಿಶ್ವವಿದ್ಯಾಲಯದಿಂದ ಚಿನ್ನದ ಪದಕದೊಂದಿಗೆ ಸಂಗೀತದಲ್ಲಿ ಎಂಎ ಪದವಿ ಗಳಿಸಿದ್ದಾರೆ. ಉಡುಪಿ ಜಿಲ್ಲಾ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕೊಂಕಣಿ ಅಕಾಡೆಮಿಯ ಕೊಂಕಣಿ ನಕ್ಷತ್ರ ಯುವಸಾಧಕಿ ಪ್ರಶಸ್ತಿ ಸಹಿತ ಅನೇಕ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

LEAVE A REPLY

Please enter your comment!
Please enter your name here