ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ : ಕೋಮು ಪ್ರಚೋದನಾ ಆರೋಪ..!

0
27

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಮು ಪ್ರಚೋದನಾ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಚುನಾವಣಾ ಪ್ರಚಾರದ ವೇಳೆ ಧರ್ಮದ ಆಧಾರದ ಮೇಲೆ ಮತದಾರರನ್ನು ಪ್ರಭಾವಿಸಲು ಯತ್ನಿಸಿದ್ದಾರೆ ಎಂಬ ಆರೋಪದಡಿ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಸಭೆಯೊಂದರಲ್ಲಿ ನಿರ್ದಿಷ್ಟ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಿಮ್ಮ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಿ ಹಾಗೂ ಒಗ್ಗಟ್ಟಾಗಿ ಟಿಎಂಸಿಗೆ ಮತ ಚಲಾಯಿಸಿ” ಎಂದು ಹೇಳಿದ್ದರು ಎನ್ನಲಾಗಿದೆ.

ಈ ಹೇಳಿಕೆಯು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹಾಗೂ ಚುನಾವಣೆಯ ಮೇಲೆ ಪ್ರಭಾವ ಬೀರುವ ಉದ್ದೇಶ ಹೊಂದಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರು ಹಾಗೂ ವಿರೋಧ ಪಕ್ಷದ ನಾಯಕರು ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಮೇ 20ರಂದು ದಕ್ಷಿಣ ಕೊಲ್ಕತ್ತಾದ ನೇತಾಜಿ ನಗರ ಪೊಲೀಸ್ ಠಾಣೆಗೆ ಸ್ಥಳೀಯ ನಿವಾಸಿ ತುಷಾರ್ ಕಾಂತಿ ದಾಸ್ ದೂರು ನೀಡಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿವಿಧ ಸಮುದಾಯಗಳ ನಡುವೆ ದ್ವೇಷ, ಭಯ ಮತ್ತು ಉದ್ವಿಗ್ನತೆ ಸೃಷ್ಟಿಸುವ ಪ್ರಯತ್ನ ಹಾಗೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ನಾಯಕರು, ಇದು ರಾಜಕೀಯ ಪ್ರೇರಿತ ಪಿತೂರಿಯಾಗಿದ್ದು, ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿ ಬಿಜೆಪಿ ನಡೆಸುತ್ತಿರುವ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here