ಡ್ರಗ್ಸ್‌ ಜಾಲಕ್ಕೆ ಪೊಲೀಸರ ಬಿಗಿ ಬಲೆ ; ಪಿ.ಐ.ಟಿ.-ಎನ್‌ಡಿಪಿಎಸ್‌ ಕಾಯ್ದೆಯಡಿ ಆರೋಪಿ ಅಂದರ್..!

0
20

ಉಡುಪಿ : ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಆರೋಪದಡಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಯುವಕನೋರ್ವನನ್ನು ಪೊಲೀಸರು ಪಿ.ಐ.ಟಿ.-ಎನ್‌ಡಿಪಿಎಸ್‌ (PIT-NDPS) ಕಾಯ್ದೆಯಡಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ ಪಶ್ಚಿಮ ವಲಯ ಮಂಗಳೂರು ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಜೂನ್ 12ರಂದು ಮಣಿಪಾಲ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಗದೀಶ ಪೂಜಾರಿ ವಿರುದ್ಧ ಮಣಿಪಾಲ ಪೊಲೀಸ್ ಠಾಣೆ ಹಾಗೂ ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳು ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳು ದಾಖಲಾಗಿವೆ.

ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಒಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಉಳಿದ ಎರಡು ಪ್ರಕರಣಗಳು ತನಿಖೆಯ ಹಂತದಲ್ಲಿವೆ. ಮಾದಕ ದ್ರವ್ಯ ಸೇವನೆ ಪ್ರಕರಣಗಳಲ್ಲಿ ಆರೋಪಿಗೆ ಈಗಾಗಲೇ ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪುನರಾವರ್ತಿತ ಅಪರಾಧ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಆರೋಪಿಯನ್ನು ಪಿ.ಐ.ಟಿ.-ಎನ್‌ಡಿಪಿಎಸ್‌ ಕಾಯ್ದೆಯಡಿ ಬಂಧಿಸಲಾಗಿದ್ದು, ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here