ಮೂಡುಬಿದಿರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ಇಲ್ಲಿನ ವಿದ್ಯಾರ್ಥಿಗಳಿಗೆ ಸಾಯಿ ಮಾರ್ನಾಡು ಸೇವಾ ಟ್ರಸ್ಟ್ ಸಂಘ ಇವರ ವತಿಯಿಂದ ಉಚಿತ ಸಮವಸ್ತ್ರಗಳನ್ನು ವಿತರಿಸಲಾಯಿತು. ಸಂಘದ ಅಧ್ಯಕ್ಷ ಯತೀಶ್ ಕೋಶಾಧಿಕಾರಿ ಪ್ರಜ್ವಲ್ ಮಹಿಳಾ ಘಟಕದ ಪ್ರತಿನಿಧಿ ಶ್ರೀಮತಿ ಉಷಾ ಕಿರಣ್ ಶ್ರೀಮತಿ ಶಶಿಕಲಾ ಗಿರೀಶ್ ದಯಾನಂದ ಹೆಗ್ಡೆ ರೋಹಿತ್ ಸತೀಶ್ shahin ಕೌಸರ್ ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಉಪಸ್ಥಿತರಿದ್ದರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ ಅಧ್ಯಕ್ಷತೆ ವಹಿಸಿ ಶಾಲೆಯ ಅಭಿವೃದ್ಧಿಯಲ್ಲಿ ಇಂತಹ ಸಂಘ ಸಂಸ್ಥೆಗಳು ಕೈಜೋಡಿಸಿದಾಗ ಊರು ಅಭಿವೃದ್ಧಿ ಗೊಳ್ಳುತ್ತದೆ ಎಂದು ಶ್ಲಾಘಿಸಿದರು ಮುಖ್ಯ ಶಿಕ್ಷಕ ಪ್ರಸನ್ನ ವಿ shenoy ಕಾರ್ಯಕ್ರಮ ಆಯೋಜಿಸಿದ್ದು ಶಿಕ್ಷಕ ರಾಬರ್ಟ್ ಡಿಸೋಜಾ ಸ್ವಯಂಸೇವಕ ಶಿಕ್ಷಕಿ ಪ್ರತಿಭಾ ಅಕ್ಷರ ದಾಸೋಹ ಸಿಬ್ಬಂದಿ ಕಸ್ತೂರಿ ಮತ್ತು ಇತರರು ಉಪಸ್ಥಿತರಿದ್ದರು.

