ಉಪ್ಪಿನಂಗಡಿ : ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆ, ಇಳಂತಿಲ, ಉಪ್ಪಿನಂಗಡಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದ್ದು, ಈ ಸಾಧನೆಗಾಗಿ ಪ್ರತಿಷ್ಠಿತ MIEF ಪ್ರಶಸ್ತಿಗೆ ಭಾಜನವಾಗಿದೆ.
ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರ ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಿರುವ ಜ್ಞಾನಭಾರತಿ ಶಾಲೆಯು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ಸಾಧಿಸುವ ಮೂಲಕ ತನ್ನ ಶೈಕ್ಷಣಿಕ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಈ ಸಾಧನೆಯ ಹಿಂದೆ ಶ್ರಮಿಸಿದ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು ಹಾಗೂ ಆಡಳಿತ ಮಂಡಳಿಯ ಸಮರ್ಪಣೆ ಮತ್ತು ಸಹಕಾರವನ್ನು ಶಾಲಾ ಆಡಳಿತ ಕೃತಜ್ಞತೆಯಿಂದ ಸ್ಮರಿಸಿದೆ. ಪ್ರತಿಷ್ಠಿತ MIEF ಪ್ರಶಸ್ತಿ ದೊರೆತಿರುವುದು ಶಾಲೆಯ ಸಾಧನೆಗೆ ಮತ್ತೊಂದು ಗರಿ ಮೂಡಿಸಿದಂತಾಗಿದೆ.
ಶಾಲೆಯ ಈ ಸಾಧನೆಗೆ ಶಿಕ್ಷಣಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

