ರಾಹುಲ್ ಗಾಂಧಿ ಜನ್ಮದಿನ ‘ಸಾಮಾಜಿಕ ನ್ಯಾಯ ದಿನ’ : ರಮೇಶ್ ಶಂಕರಘಟ್ಟ

0
20

​ಶಿವಮೊಗ್ಗ : ಜೂನ್ 19ರಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಜನ್ಮದಿನವನ್ನು ‘ಸಾಮಾಜಿಕ ನ್ಯಾಯ ದಿನ’ವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ತಿಳಿಸಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಡಿ.ಟಿ. ಶ್ರೀನಿವಾಸ್ ಈ ಘೋಷಣೆ ಮಾಡಿದ್ದಾರೆ ಎಂದರು.
​ಜೂನ್ 21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನೂತನ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ತೆರಳಲಿದ್ದಾರೆ.

ಇದೇ ವೇಳೆ, ಆರ್.ಎಸ್.ಎಸ್ ನೋಂದಣಿ ಕುರಿತ ಗೃಹಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಯನ್ನು ಬೆಂಬಲಿಸಿದ ಅವರು, ಸಣ್ಣ ಸಂಸ್ಥೆಗಳಿಗೂ ನೋಂದಣಿ ಕಡ್ಡಾಯವಿರುವಾಗ ಆರ್.ಎಸ್.ಎಸ್ ನೋಂದಣಿ ಆಗಲೇಬೇಕಿದೆ ಎಂದರು.

-ಮಂದಾರ ರಾಜೇಶ್ ಭಟ್

LEAVE A REPLY

Please enter your comment!
Please enter your name here