ಡಿಪ್ಲೊಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ

0
16

ಉಡುಪಿ: 2020-27ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು 12.08.2026 ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಮುಂದುವರಿದು, ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು 03.07.2028ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿಯನ್ನು www.uahs.edu.in ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಬಹುದು. ಡೌನ್‌ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 03.07.2026ರ ಒಳಗೆ ಸಲ್ಲಿಸಬಹುದಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45% (ಕನಿಷ್ಠ ಶೇ. 40% ಪ.ಜಾ. ಮತ್ತು ಪ.ಪಂ./ಪ್ರವರ್ಗ-2) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50% ರಷ್ಟುಮೀಸಲಾತಿ ಇರುತ್ತದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ :- ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ – 576213, ಉಡುಪಿ ಜಿಲ್ಲೆ. : 9108241342, 9686405090, 8884141445.

LEAVE A REPLY

Please enter your comment!
Please enter your name here