ಮೂಡುಬಿದಿರೆ : ತಾಲೂಕು ಕಲ್ಲಬೆಟ್ಟು ಗ್ರಾಮದ ಪಿಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗ ಶಿಕ್ಷಕಿ ದೀವಾ, ದೈಹಿಕ ಶಿಕ್ಷಕ ವಿನ್ ಫ್ರೆಡ್ ಪಿಂಟೋ ಅವರು ಯೋಗದ ಮಹತ್ವ ಹಾಗೂ ದೈನಂದಿನ ಬದುಕಿನಲ್ಲಿ ಯೋಗದ ಅವಶ್ಯಕತೆಯ ಮುಖ್ಯ ಅಂಶಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸಿದರು. ಶಾಲೆಯ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು, ಮುಖ್ಯ ಶಿಕ್ಷಕರು ಯೋಗ ನಡೆಸುವ ಮೂಲಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲುಗೊಂಡರು.
ವರದಿ ರಾಯಿ ರಾಜ ಕುಮಾರ
.

