ಉಪ್ಪಿನಂಗಡಿ ಪಿಯು ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

0
36

ಉಪ್ಪಿನಂಗಡಿ : ಸರಕಾರಿ ಪದವಿ ಪೂರ್ವ ಕಾಲೇಜು, ಉಪ್ಪಿನಂಗಡಿ ಮತ್ತು ರಾಷ್ಟ್ರೀಯ ಸ್ವಯಂಸೇವಾ ಯೋಜನೆ ಇದರ ವತಿಯಿಂದ 20 ಜೂನ್ 2026, ಶನಿವಾರದಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವು ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ವಿದ್ಯಾರ್ಥಿನಿ ಕು. ಮಹಾಲಕ್ಷ್ಮಿ ಅವರು ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ರಮೇಶ್ ಎಚ್. ಜೆ. ಅವರು ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ತಿಳಿಸುವ ಪ್ರಸ್ತಾವಿಕ ನುಡಿಗಳನ್ನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಅಜೀಜ್ ಬಸ್ತಿಕಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಇಬ್ರಾಹಿಂ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯೋಗವು ಪ್ರತಿಯೊಬ್ಬರ ಜೀವನದಲ್ಲಿ ಆರೋಗ್ಯಕರ ಬದುಕಿಗೆ ಅತ್ಯಗತ್ಯ ಎಂಬ ಸಂದೇಶವನ್ನು ನೀಡಿದರು.

SPYSS ಘಟಕದ ಯೋಗ ಶಿಕ್ಷಕರಾದ ಪ್ರದೀಪ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಯೋಗದ ಮಹತ್ವ, ಅದರ ಆರೋಗ್ಯಕರ ಪ್ರಯೋಜನಗಳು ಹಾಗೂ ನಿತ್ಯ ಜೀವನದಲ್ಲಿ ಯೋಗಾಭ್ಯಾಸದ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಅಲ್ಲದೆ ಕೆಲವು ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನೂ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಸದಸ್ಯರಾದ ಸುಜಾತ ಅವರು ವಿಶೇಷ ಅತಿಥಿಯಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ವಿದ್ಯಾರ್ಥಿನಿ ಕು. ಸಂಜನಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

LEAVE A REPLY

Please enter your comment!
Please enter your name here