ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ತಕ್ಷಶಿಲಾ ಹಾಗೂ ಶಾರದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗಾಗಿ ಯೋಗ ಶಿಬಿರ ಪ್ರಾರಂಭಗೊAಡಿರುತ್ತದೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣವೆಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ಸಂಸ್ಕಾರ- ಸಂಘಟನೆ – ಸೇವೆ ಎಂಬ ಧ್ಯೇಯೋದ್ದೇಶದೊಂದಿಗೆ ಯೋಗ ಶಿಕ್ಷಣವನ್ನು ನೀಡುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ, ಪುತ್ತೂರು ತಾಲೂಕು ಸಮಿತಿಯ ಸಹಯೋಗದೊಂದಿಗೆ ಈ ಶಿಬಿರ ನಡೆಯುತ್ತಿದೆ.

ತಕ್ಷಶಿಲಾ ಬಾಲಕರ ವಸತಿನಿಲಯಹಾಗೂ ಶಾರದ ಬಾಲಕಿಯರ ವಸತಿ ನಿಲಯಗಳಲ್ಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಶಿಕ್ಷಕರಾದ ಜಯಪ್ರಸಾದ್ ಹಾಗೂ ಹರಿಪ್ರಸಾದ್, ಜಿಲ್ಲಾ ಸಂಘಟನ ಪ್ರಮುಖರು ಇವರ ನೇತೃತ್ವದಲ್ಲಿ ಯೋಗಶಿಬಿರವು ನಡೆಯುತ್ತಿದೆ.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಹಾಗೂ ಏಕಾಗ್ರತೆಯನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಈ ಯೋಗ ಶಿಬಿರವನ್ನು ನಡೆಸಲಾಗುತ್ತಿದೆ.

