ಮಂಗಳೂರು : ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಷನ್ ಆಯೋಜಿಸಿರುವ ‘ಅನ್ ಈವ್ನಿಂಗ್ ವಿತ್ ಶಾರುಖ್ ಖಾನ್’ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ಸೂಪರ್‌ಸ್ಟಾರ್ ಹಾಗೂ ಜಾಗತಿಕ ಮನರಂಜನಾ ಕ್ಷೇತ್ರದ ಐಕಾನ್ ಶಾರುಖ್ ಖಾನ್ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ನಗರದ ಆದ್ಯಾರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ಬಹು ನಿರೀಕ್ಷಿತ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಉದ್ಯಮ ಕ್ಷೇತ್ರದ ಗಣ್ಯರು, ವ್ಯಾಪಾರ ಮುಖಂಡರು, ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಅತಿಥಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರೋಹನ್ ಕಾರ್ಪೊರೇಷನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂಟೇರೊ ಮಾತನಾಡಿ, ಶಾರುಖ್ ಖಾನ್ ಅವರ ಭೇಟಿ ಸಂಸ್ಥೆಗೆ ಹೆಮ್ಮೆಯ ಕ್ಷಣವಾಗಿದ್ದು, ಅತಿಥಿಗಳಿಗೆ ಸ್ಮರಣೀಯ ಅನುಭವ ನೀಡಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸಂಸ್ಥೆಯ ನಿರ್ದೇಶಕ ಡಿಯೋನ್ ಮೊಂಟೇರೊ ಮಾತನಾಡಿ, ಮಂಗಳೂರಿನಲ್ಲಿ ಇದುವರೆಗೆ ನಡೆದ ಅತ್ಯಂತ ಪ್ರಮುಖ ಕಾರ್ಪೊರೇಟ್ ಕಾರ್ಯಕ್ರಮಗಳಲ್ಲಿ ಇದೂ ಒಂದಾಗಲಿದ್ದು, ನಗರದ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ಆಯೋಜಕರು ನೀಡಿರುವ ಮಾನ್ಯ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ರೋಹನ್ ಕಾರ್ಪೊರೇಷನ್ ಕುರಿತು
ರೋಹನ್ ಕಾರ್ಪೊರೇಷನ್ ಕರಾವಳಿ ಕರ್ನಾಟಕದ ಪ್ರಮುಖ ಹಾಗೂ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಅಭಿವೃದ್ಧಿ ಸಂಸ್ಥೆಗಳಲ್ಲಿ ಒಂದಾಗಿದೆ. ವಸತಿ, ವಾಣಿಜ್ಯ ಹಾಗೂ ಮಿಶ್ರ ಬಳಕೆಯ (ಮಿಕ್ಸ್ಡ್-ಯೂಸ್) ಮಹತ್ವದ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ನಿರ್ಮಿಸಿ ಹೆಸರಾಗಿರುವ ಸಂಸ್ಥೆಯಾಗಿದೆ.
ವಿಶ್ವಾಸ, ಗುಣಮಟ್ಟ, ನವೀನತೆ ಮತ್ತು ಗ್ರಾಹಕ-ಕೇಂದ್ರಿತ ಸೇವೆ ಎಂಬ ಭದ್ರ ಅಡಿಪಾಯದ ಮೇಲೆ ನಿರ್ಮಿತವಾಗಿರುವ ರೋಹನ್ ಕಾರ್ಪೊರೇಷನ್, ಕರಾವಳಿ ಪ್ರದೇಶದ ನಗರಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಾ ಬಂದಿದೆ. ತನ್ನ ಅತ್ಯುತ್ತಮ ಯೋಜನೆಗಳ ಮೂಲಕ ನಿರಂತರವಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತಾ, ಶ್ರೇಷ್ಠತೆಯ ಹೊಸ ಮೈಲಿಗಲ್ಲುಗಳನ್ನು ನಿರ್ಮಿಸುತ್ತಿದೆ.

