ಮೂಲ್ಕಿ : ₹2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾ ವಶ ; ಆರೋಪಿ ಸೆರೆ..!

0
111

ಮಂಗಳೂರು : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ, ಆತನಿಂದ ಸುಮಾರು ₹2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಉಳ್ಳಾಲ ತಾಲೂಕಿನ ಕೋಟೆಕಾರ್ ಗ್ರಾಮದ ಹಿದಾಯತ್ ನಗರ ಮುಳ್ಳುಗುಡ್ಡೆಯ ಹಿದಾಯತ ಮಸೀದಿ ಸಮೀಪದ ನಿವಾಸಿ ಅಬ್ಬಾಸ್ (50) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಜೂನ್ 25ರಂದು ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಆರೋಪಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಲಾಗಿದೆ. ಈ ವೇಳೆ ಆತನ ಬಳಿಯಿದ್ದ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 45/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯ ವಿರುದ್ಧ ಈ ಹಿಂದೆಯೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. 2021ರಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಐಪಿಸಿ ಕಲಂಗಳಡಿ ಪ್ರಕರಣ ದಾಖಲಾಗಿದ್ದರೆ, 2026ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮತ್ತೊಂದು ಪ್ರಕರಣವೂ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಗಾಂಜಾ ಜಾಲದ ಕುರಿತು ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here