ಡಾ. ರಾಜಶ್ರೀ ಬಿ.ಯವರಿಗೆ ಮೂಡುಮಾರ್ನಾಡು ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

0
52

ಮೂಡುಬಿದಿರೆ : ಮೂಡುಮಾರ್ನಾಡು ಪಿ.ಎಂ.ಶ್ರೀ. ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದು, ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಪದೋನ್ನತಿ ಹೊಂದಿರುವ ಡಾ|| ರಾಜಶ್ರೀ ಬಿ. ಇವರನ್ನು ಅಭಿನಂದಿಸಿ ಬೀಳ್ಕೊಡುವ ಕಾರ್ಯಕ್ರಮವು, ಶಾಲೆಯ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಕಂಬಳ ಕ್ಷೇತ್ರದ ಧುರೀಣ ಹಾಗೂ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ಭಾಸ್ಕರ ಎಸ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನೆರವೇರಿತು. ಶ್ರೀಯುತರು ಡಾ||ರಾಜಶ್ರೀ ಬಿ. ಇವರನ್ನು ಸನ್ಮಾನಿಸಿ, ಮೂಡುಮಾರ್ನಾಡು ಪ್ರೌಢಶಾಲೆಯ ಪ್ರಗತಿಯಲ್ಲಿ ಸನ್ಮಾನಿತರ ಪಾತ್ರವನ್ನು ಸ್ಮರಿಸಿ, ಅವರ ಮುಂದಿನ ವೃತ್ತಿ ಜೀವನದಲ್ಲಿ ಇನ್ನೂ ಉನ್ನತ ಸ್ಥಾನಕ್ಕೇರಲು ಭಗವಂತನ ಅನುಗ್ರಹವಿರಲಿ ಎಂದು ಶುಭಹಾರೈಸಿದರು.

ಗಣಿತ ಶಿಕ್ಷಕಿ ಸುಮಿತಾ ಹಾಗೂ ನಿಕಟಪೂರ್ವ ಗ್ರಾಮ ಪಂಚಾಯತಿ ಸದಸ್ಯರಾದ ಸತೀಶ ಕರ್ಕೇರ ಸನ್ಮಾನಿತರ ಕೊಡುಗೆಗಳನ್ನು ಸ್ಮರಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದಿರುವ ಪಡುಮಾರ್ನಾಡು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ ಇವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮೂಡುಬಿದಿರೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿರುವ ವಿರೂಪಾಕ್ಷಪ್ಪ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರಾದ ಯಶೋಧರ ಆಚಾರ್ಯ, ಮೂಡುಮಾರ್ನಾಡು ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶೋಭಾ, ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರು ಹಾಜರಿದ್ದರು.
ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ಸ್ವಾಗತಿಸಿದರು. ಹಿಂದಿ ಭಾಷಾ ಶಿಕ್ಷಕಿ ಬಾಬಿ ಧನ್ಯವಾದ ಸಲ್ಲಿಸಿದರು. ಸಮಾಜ ಶಿಕ್ಷಕ ಜೋನ್ ರೊನಾಲ್ಡ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here