ಹೆಬ್ರಿ : ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭ ನಡೆಯಿತು. ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯ ಅತಿಥಿ ಕೆ.ರಾಮಚಂದ್ರ ಭಟ್ ವರಂಗ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ, ಶಿಸ್ತು, ನಿಷ್ಠೆ ಬೆಳೆಸಿಕೊಳ್ಳಲು ಸದವಕಾಶವಾಗಿದೆ. ಭವಿಷ್ಯದಲ್ಲಿ ಉತ್ತಮ ತರಬೇತಿ ಪಡೆಯುವಂತೆ ಸಲಹೆ ನೀಡಿದರು.

ಟ್ರಸ್ಟ್ ನ ಸದಸ್ಯ ಯೋಗೀಶ್ ಭಟ್ ಮಾತನಾಡಿ, ಬಾಲ್ಯದಲ್ಲಿಯೇ ವಿದ್ಯಾರ್ಥಿಗಳು ರಾಷ್ಟ್ರದ ಸ್ವತ್ತಾಗಿ ಬೆಳೆಯಬೇಕು. ಜೀವನದಲ್ಲಿ ಸರ್ವರನ್ನೂ ಸಮಾನವಾಗಿ ಕಾಣುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಂಸ್ಥೆಯ ಮುಖ್ಯಶಿಕ್ಷಕಿ ಅಪರ್ಣಾ ಆಚಾರ್, ಶಕುಂತಲಾ ಮತ್ತು ಗುರುವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಪಲ್ಲವಿ ಸ್ವಾಗತಿಸಿ, ಗ್ರೀಷ್ಮಾ ವಂದಿಸಿ, ಸಾನ್ವಿ ನಿರೂಪಿಸಿದರು.

