ಉಡುಪಿ : ನಗರದ ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಉಡುಪಿ ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಈ ಹಿಂದೆಯೂ ವಿವಿಧ ದೇವಸ್ಥಾನಗಳ ಕಾಣಿಕೆ ಹುಂಡಿಗಳು ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೈವಸ್ಥಾನಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಕಳವು ಕೃತ್ಯದ ದೃಶ್ಯಗಳು ಸೆರೆಯಾಗಿದ್ದವು. ಈ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ನಡೆಸಿದ ಉಡುಪಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

