ಪಡುಬಿದ್ರಿ ಶಾಖೆಯ 4ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

0
7

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ 4ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಪಡುಬಿದ್ರಿ ಶಾಖೆಯಲ್ಲಿ ಜರುಗಿತು.

ಸಂಘದ ಸದಸ್ಯರಾದ ಶ್ರೀಯುತ ಶೀನ ಪೂಜಾರಿ ಯವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಗತ್ಯ ಸಂದರ್ಭಗಳಲ್ಲಿ ಗ್ರಾಹಕರ ಮನೆಗೆ ಬಂದು ಸೇವೆ ನೀಡುತ್ತಿದೆ. ಇಂತಹ ಸೇವೆಗಳು ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಸದಸ್ಯರಾದ ಸುನಿಲ್ ಕುಮಾರ್ ರವರು ಮಾತನಾಡಿ “ಆತ್ಮಶಕ್ತಿ ಸಂಘವು ಕೇವಲ ಬ್ಯಾಂಕಿಂಗ್ ಕ್ಷೇತ್ರ ಮಾತ್ರವಲ್ಲದೇ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದೆ. ಸಂಘವು ಇನ್ನಷ್ಟು ಉನ್ನತ ಸ್ಥಾನಕ್ಕೆ ಏರಲಿ” ಎಂದು ಶುಭ ಹಾರೈಸಿದರು.

ಗ್ರಾಹಕರಾದ ಶಶಿಕಾಂತ್ ಪಡುಬಿದ್ರಿ ರವರು ಮಾತನಾಡಿ “ಉತ್ತಮ ಮಾರ್ಗದರ್ಶನ ನೀಡುವ ಆಡಳಿತ ಮಂಡಳಿ ಹಾಗೂ ಉತ್ತಮ ಸೇವೆ ನೀಡುವ ಸಿಬ್ಬಂದಿವರ್ಗ ದಿಂದ ಸಂಘವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ” ಎಂದರು.

ಅಧ್ಯಕ್ಶತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ““ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ.

ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ಎಲ್ಲಾ ರೀತಿಯ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಮುಂಬರುವ ಸಂಘದ ಮಹಾಸಭೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಇದರ ಸದುಪಯೋಗವನ್ನು ಪಡೆಯುವಂತೆ ವಿನಂತಿಸಿದರು.

ಪಡುಬಿದ್ರಿ ಶಾಖೆಯ ಚತುರ್ಥ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ. , ನಿರ್ದೇಶಕರಾದ ಬಿ.ಪಿ ದಿವಾಕರ್, ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್ ಉಪಸ್ಥಿತರಿದ್ದರು. ಹಿರಿಯ ಶಾಖಾಧಿಕಾರಿಯಾದ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿ ಲೋಶಿತಾ ರವರು ವಂದಿಸಿದರು.

LEAVE A REPLY

Please enter your comment!
Please enter your name here