ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

0
6

ಕಾರ್ಕಳ : ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ಸಹಯೋಗದೊಂದಿಗೆ ,ಪೊಲೀಸ್ ಇಲಾಖೆಗೆ ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರವು
ಜೂನ್ 29 ಸೋಮವಾರ ಕಾರ್ಕಳದ ಮಂಜುನಾಥ ಪೈ ಸಭಾಭವನ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಕಳ ವ್ರತ್ತ ನೀರಿಕ್ಷಕ ಸಂದೀಪ್ ಜಿ ಎಸ್ ಮಾತನಾಡಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೆಲಸಕ್ಕೆ ವಿಪುಲ ಅವಕಾಶಗಳಿದ್ದು ಕರ್ನಾಟಕದ ವಿವಿಧ ಭಾಗದ ಜನರು ಹೆಚ್ಚಿನ ಸಂಖ್ಯೆಯಲಿದ್ದಾರೆ ಆದರೆ ಕರಾವಳಿ ಕರ್ನಾಟಕ ಭಾಗದ ಜನರ ಪ್ರತಿನಿದಿತ್ವ ಬಹಳ ಕಮ್ಮಿ ಇದೆ ಕೇವಲ ಬೆರಳೆಣಿಕೆಯಸ್ಟು ಜನರು ಮಾತ್ರ ಇದ್ದಾರೆ ಈ ಭಾಗದ ಜನರು ಬುದ್ದಿವಂತರು ವಿದ್ಯಾವಂತರು ಇಂತಹ ಅವಕಾಶಗಳನ್ನು ಸದ್ಭಳಕೆ ಮಾಡಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಎಂ ಎಸ್ ಮಾತನಾಡಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಸವಲತ್ತುಹಾಗೂ ಕೆಲಸದ ಉಪಯೋಗಗಳ ಪೂರ್ಣ ಮಾಹಿತಿ ನೀಡಿದರು.

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು . ಈ ಸಂದರ್ಭದಲ್ಲಿ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರಿಕ್ಷಕರು(ತನಿಖೆ ) ನವೀನ್ ಬೊರ್ಕರ್, ಪ್ರೊಬೆಷನರಿ ಪಿಎಸ್ಐ ಸೀಮಾ ಅಂಜುಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here