ದುಬೈಯಲ್ಲಿ ಸೆ.20ರಂದು ಸಾರ್ವಜನಿಕ ಗಣೇಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

0
23

ದುಬೈ : ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ವತಿಯಿಂದ ಸೆಪ್ಟೆಂಬರ್ 20ರಂದು ಅರ್ಮಾನ್ ಇಂಡಿಯನ್ ಅಸೋಸಿಯೇಷನ್ ನ ಸಭಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಪ್ರಚಾರ ಕಾರ್ಯದ ಮೂಹೂರ್ತ ಇತ್ತಿಚೆಗೆ ದುಬೈಯ ಪುಣೆ ರೆಸಿಡೆನ್ಸಿಯಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ, ಸಂಧ್ಯಾ ಕ್ರಿಯೇಷನ್ಸ್ ನ ಮುಖ್ಯಸ್ಥ ಶೋಧನ ಪ್ರಸಾದ್ ಹಾಗೂ ರಾಮಕ್ಷತ್ರಿಯ ಸಂಘ ಯುಏಈಯ ಉಪಾಧ್ಯಕ್ಷರಾದ ಲಕ್ಷ್ಮೀಶ ಚೇತನ್ ಉಪಸ್ಥಿತರಿದ್ದರು.


ನಂತರ ನಡೆದ ಸಭೆಯಲ್ಲಿ ಉತ್ಸವದ ಸಮಿತಿಯ ಮುಖ್ಯ ಸಂಚಾಲಕರಾಗಿ ಸುಗಂಧರಾಜ ಬೇಕಲ್ ಹಾಗೂ ಅಜಿತ್ ಕೊರಕೋಡು, ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲ್ವಿಚಾರಕಾರಾಗಿ ಸತೀಶ್ ಹಂಗಳೂರು,ಮಹಿಳಾ ವೃಂಧಧ ಮುಖ್ಯಸ್ಥೆಯಾಗಿ ಶ್ರೀಮತಿ ಸ್ಮಿತಾ ಗಣೇಶ್ ರಾವ್ ರವರನ್ನು ನೇಮಕ ಮಾಡಲಾಯಿತು.
ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾದ ಮಹೇಶ್ ಚಂದ್ರಗಿರಿ, ಉಪಾಧ್ಯಕ್ಷರಾದ ಪ್ರವೀಣ್ ಉಪ್ಪೂರು, ಕಾರ್ಯದರ್ಶಿ ಸುನಿಲ್ ರಾವ್,ಕೋಶಾಧಿಕಾರಿ ರಾಜೇಶ್ ರಾವ್ ಪುಣೆ, ಜೊತೆ ಕಾರ್ಯದರ್ಶಿ ಬಿಪಿನ್ ಚಂದ್ರ ನಾಯಕ್, ಕ್ರೀಡಾ ಕಾರ್ಯದರ್ಶಿ ಸುಬ್ರಹ್ಮಣ್ಯ ಕೆ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here