ಮಂಗಳೂರು: ಜೂನ್ 30ರಿಂದ ಜುಲೈ 29ರವರೆಗೆ ರಾಜ್ಯದಲ್ಲಿ ನಡೆಯಲಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮನೆಗಳಿಗೆ ಭೇಟಿ ನೀಡುವ ಬಿಎಲ್‌ಒಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸುವುದರೊಂದಿಗೆ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮನವಿ ಮಾಡಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಯಾಗದಿದ್ದಲ್ಲಿ ಭವಿಷ್ಯ ದಲ್ಲಿ ವಿವಿಧ ಸರ್ಕಾರಿ ಸೇವೆಗಳು ಹಾಗೂ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ಸಂದರ್ಭದಲ್ಲಿ ಅವಕಾಶ ವಂಚಿತರಾಗಿ ತೊಂದರೆಗಳು ಉಂಟಾಗುವ ಸಾಧ್ಯತೆ ಇರುವುದು. ಬಡತನ, ದಾಖಲೆಗಳ ಕೊರತೆ, ಸ್ಥಳಾಂತರ, ಅಂಗವೈಕಲ್ಯ ಅಥವಾ ಮಾಹಿತಿಯ ಕೊರತೆಯಿಂದ ಯಾವುದೇ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಇದು ಚುನಾವಣಾ ಆಯೋಗ, ರಾಜಕೀಯ ಪಕ್ಷಗಳು ಮತ್ತು ಪ್ರತಿಯೊಬ್ಬ ಜಾಗೃತ ನಾಗರಿಕನ ಜವಾಬ್ದಾರಿಯಾಗಿದೆ ಎಂದು ರಾಷ್ಟ್ರೀಯ ಬಿಲ್ಲವ ಮಹಾಮಂಡಲ ತಿಳಿಸಿದೆ. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿಯಾಗಲು ಮನೆ ಮನೆಗಳಿಗೆ ಭೇಟಿ ನೀಡುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸಾರ್ವಜನಿಕರು ಸಂಪೂರ್ಣ ದಾಖಲೆ ಸಹಿತ ಸಹಕಾರ ನೀಡುವಂತೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಸೂರ್ಯ ಜೆ. ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home Uncategorized ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುವಂತೆ ಎಚ್ಚರವಹಿಸಲು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಕರೆ
