ಮೂಡುಮಾರ್ನಾಡು ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಅಭಿನಂದನಾ ಸಮಾರಂಭ

0
13

ಮೂಡುಮಾರ್ನಾಡು ಪಿ.ಎಂ.ಶ್ರೀ. ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ 2026 ರ ಸಾಲಿನಲ್ಲಿ 100% ಫಲಿತಾಂಶ ಪಡೆದ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಫಲಿತಾಂಶ ಸಾಧನೆಗಾಗಿ ಶಾಲೆಯ ಶಿಕ್ಷಕವೃಂದದವರನ್ನು ಶಾಲಾ ಎಸ್ ಡಿ ಎಂ ಸಿ ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ನಡೆಯಿತು.

ಕಳೆದ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಪ್ರೀತಿಕಾ, ಶಾನ್ವಿ, ಮಾನ್ಯ ಹಾಗೂ ನಿಶಾತ್ ಫಾತಿಮಾ ಇವರನ್ನು ‌ಹಾಗೂ ಕಳೆದ ಮೂರು ವರ್ಷಗಳಲ್ಲಿ ಸತತವಾಗಿ 100% ಫಲಿತಾಂಶ ಪಡೆದ ತಾಲೂಕಿನ ಏಕೈಕ ಸರಕಾರಿ ಪ್ರೌಢಶಾಲೆ ಎಂಬ ಕೀರ್ತಿಗೆ ಕಾರಣರಾದ ಶಾಲಾ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಎಸ್.ಡಿ.ಎಂ.ಸಿ.ಅಧ್ಯಕ್ಷ ಭಾಸ್ಕರ ಎಸ್ ಕೋಟ್ಯಾನ್ , ಶಾಲೆಯು ಸ್ಥಾಪನೆಯಾದ ದಿನದಿಂದ ಈವರೆಗೂ ಉತ್ತಮ ಸಾಧನೆ ಮಾಡುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.

ಮೂಡುಬಿದಿರೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್. ಎಸ್. ವಿರೂಪಾಕ್ಷಪ್ಪ ಅವರು ತಾಲ್ಲೂಕಿನ ಸರಕಾರಿ ಪ್ರೌಢಶಾಲೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದು ಶಾಲೆಯ ಒಟ್ಟು ಹತ್ತು ಮಕ್ಕಳು ಕಂಪ್ಯೂಟರ್ ಗಳನ್ನು ಸರ್ಕಾರದಿಂದ ಬಹುಮಾನವಾಗಿ ಪಡೆದಿರುವುದು ಅತೀ ಹೆಮ್ಮೆಯ ವಿಷಯ ಎಂದು ತಿಳಿಸಿದರು. ಪಡುಮಾರ್ನಾಡು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರಾದ ಯಶೋಧರ ಆಚಾರ್ಯ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೋಭಾ, ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಪೋಷಕರು ಹಾಜರಿದ್ದರು.

ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ಸ್ವಾಗತಿಸಿದರು. ಶಿಕ್ಷಕಿ ಬಾಬಿ ಧನ್ಯವಾದ ಸಲ್ಲಿಸಿದರು. ಶಿಕ್ಷಕ ಜೋನ್ ರೊನಾಲ್ಡ್ ಕಾರ್ಯಕ್ರಮ ನಿರೂಪಿಸಿದರು.
.

LEAVE A REPLY

Please enter your comment!
Please enter your name here