ವಿಶ್ವ ಪರಿಸರ ದಿನಾಚರಣೆ: ಹೆಬ್ರಿ ಪತ್ರಕರ್ತರ ಸಂಘದಿಂದ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಅಭಿಯಾನ

0
10

ಹೆಬ್ರಿ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಕಾರದಲ್ಲಿ ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಹೆಬ್ರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿಶ್ವ ಪರಿಸರ ದಿನಾಚರಣೆ. ಮುಂದೊಂದು ದಿನ ಆಕ್ಸಿಜನ್‌ ಗಾಗಿ ಹುಡುಕಾಡುವ ಕಾಲ ಬರಬಹುದು : ಡಾ.ಭಾರ್ಗವಿ ಆರ್‌ ಐತಾಳ್.‌ ಹೆಬ್ರಿ : ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸಬೇಕು. ಆ ಕಾರ್ಯ ಎಲ್ಲೆಡೆಯು ನಡೆಯಬೇಕು. ಇಲ್ಲವಾದಲ್ಲಿ ಮುಂದೊಂದು ದಿನ ಆಕ್ಸಿಜನ್‌ ಗಾಗಿ ಹುಡುಕಾಡುವ ಕಾಲ ಬರಬಹುದು. ನಮ್ಮ ಇಂದಿನ ಯುವ ಸಮೂಹ, ವಿದ್ಯಾರ್ಥಿಗಳು, ಪರಿಸರದ ಮಹತ್ವವನ್ನು ಅರಿತು ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಹೆಬ್ರಿ ರಾಘವೇಂದ್ರ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷೆ ಡಾ. ಭಾರ್ಗವಿ ಆರ್.‌ ಐತಾಳ್‌ ಹೇಳಿದರು.

ಅವರು ಹೆಬ್ರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯ ನಿಸರ್ಗ ಇಕೋ ಕ್ಲಬ್‌,, ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಮೇರಾ ಭಾರತ್‌ ಭಾರತ್‌ ಉಡುಪಿ ಜಿಲ್ಲೆ ಮತ್ತು ಪ್ರಶಸ್ತಿ ಪುರಸ್ಕೃತ ಶಾಂತಿನಿಕೇತನ ಯುವ ವೃಂದ ಕುಚ್ಚೂರು ಕುಡಿಬೈಲು ಸಹಕಾರದಲ್ಲಿ ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಚರಣ್‌ ರಾಜ್‌ ಜೋಗಿ ಮಾತನಾಡಿ ಪರಿಸರದ ರಕ್ಷಣೆಯು ವಿದ್ಯಾರ್ಥಿಗಳ ಹೊಣೆಯಾಗಬೇಕು, ಮುಂದಿನ ಜನಾಂಗಕ್ಕೆ ನಮ್ಮ ಪರಿಸರ ಉಳಿಯಬೇಕಾದರೆ ನಮ್ಮ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ, ಪ್ಲಾಸ್ಟೀಕ್‌ ಬಳಕೆ ನಮ್ಮ ಪರಿಸರಕ್ಕೆ ದೊಡ್ಡ ಸವಾಲಾಗಿದೆ. ಎಲ್ಲರೂ ಸೇರಿ ಸಂಕಲ್ಪ ಮಾಡಿ ಪ್ಲಾಸ್ಟೀಕ್‌ ಬಳಕೆ ಕಮ್ಮಿ ಮಾಡಿದಾಗ ಪರಿಸರ ಉಳಿಸಲು ಸಾಧ್ಯ ಎಂದರು.

ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪ್ರಭಾವತಿ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಸಂಜೀವ ಆರ್ಡಿ, ಪ್ರಧಾನ ಕಾರ್ಯದರ್ಶಿ ಸುಕುಮಾರ್‌ ಮುನಿಯಾಲ್‌, ಶಿಕ್ಷಕ ವೃಂದ, ಇಕೋ ಕ್ಲಬ್‌ ಪದಾಧಿಕಾರಿಗಳು, ಅರಣ್ಯ ಇಲಾಖೆಯ ಕನಕಪ್ಪ ಮುಂತಾದವರು ಉಪಸ್ಥಿತರಿದ್ದರು. ಹೆಬ್ರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನರೇಂದ್ರ ಎಸ್‌ ಮರಸಣಿಗೆ ಪ್ರಾಸ್ತಾವಿಕವಾಗಿ ಮಾತನಾಡಿ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here