ಮೂಡುಬಿದಿರೆ : ಶ್ರೀ ಮಹಾವೀರಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್‌ಕಾರ್ಯಕ್ರಮದ ಅಂಗವಾಗಿ ನಮ್ಮ ಸಹ ಸಂಸ್ಥೆಯಾದಎ.ಜಿ. ಸೋನ್ಸ್ಐ.ಟಿ.ಐ. ಯ ಹಿರಿಯಉಪನ್ಯಾಸಕರಾದ ಶಿವಪ್ರಸಾದ ಹೆಗ್ಡೆಯವರು“ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ” ಬಗ್ಗೆ ಮಾಹಿತಿನೀಡಿದರು.

ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿರುವ ಈ ಕಾಲದಲ್ಲಿ ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ಪಾಲಿಸಬೇಕು, ಅಪಘಾತಗಳಾಗದಂತೆ ಯಾವರೀತಿ ಮುಂಜಾಗೃತೆ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಕೆಲವಷ್ಟು ನೈಜ ಘಟನೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಕಾರ್ಯಕ್ರಮದಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ವಹಿಸಿದ್ದರು.ಕಾರ್ಯಕ್ರಮ ಸಂಯೋಜಕಿ ದೀಕ್ಷಾ ಉಪಸ್ಥಿತರಿದ್ದರು.ಉಪನ್ಯಾಸಕಿ ಪದ್ಮಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

