ಮಂಗಳೂರಿನ ರಾಮಕೃಷ್ಣ ಮಠದಲ್ಲಿ ಜುಲೈ 6ರಿಂದ ಯೋಗಾಸನ ಶಿಬಿರ

0
8

ಮಂಗಳೂರು : ನಗರದ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಸಾರ್ವಜನಿಕರಿಗಾಗಿ ಜುಲೈ 6ರಿಂದ ಪ್ರತಿದಿನ ಸಂಜೆ 5.00 ರಿಂದ 6.30ರವರೆಗೆ ಯೋಗಾಸನ ಶಿಬಿರವನ್ನು ಆಯೋಜಿಸಲಾಗಿದೆ.

ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಶಿಬಿರದಲ್ಲಿ ಯೋಗಾಸನ, ವಿವಿಧ ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ ಹಾಗೂ ಧ್ಯಾನ ಮಾಡುವ ಸರಿಯಾದ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಿದ್ದಾರೆ.

ಈ ಶಿಬಿರವು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ತಯಾರಿಯ ಅಂಗವಾಗಿ ಆಯೋಜಿಸಲಾಗಿದ್ದು, ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಯೋಗಾಭ್ಯಾಸದಲ್ಲಿ ಆಸಕ್ತಿ ಹೊಂದಿರುವ ಸಾರ್ವಜನಿಕರು ತಮ್ಮ ಹೆಸರನ್ನು ರಾಮಕೃಷ್ಣ ಮಠದ ಕಾರ್ಯಾಲಯದಲ್ಲಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 2414412 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here