ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

0
4

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ, ಶಾಲಾ ಕಾಲೇಜುಗಳ ಸಹಯೋಗದಲ್ಲಿ ವಿಟ್ಲ ತಾಲೂಕು ಪೆರ್ನೆ ವಲಯದ ಅಯೋಧ್ಯಾ ನಗರ ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಆನ್ಲೈನ್ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ||ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರು ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಆಶೀರ್ವದಿಸಿದರು. ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಆಶಯ ಭಾಷಣ ಮಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ|| ವೆಂಕಟೇಶ್ ಪ್ರಸನ್ನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಬೆಂಗಳೂರು, ಡಾ|| ದೇವಿಪ್ರಸಾದ್ ಶೆಟ್ಟಿ ಖ್ಯಾತ ಹೃದ್ರೋಗ ತಜ್ಞರು ಆನ್ಲೈನ್ ಮೂಲಕ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪೆರ್ನೆ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ರೋಹಿತಾಕ್ಷ ಬಾಣಬೆಟ್ಟು, ಸದಸ್ಯರಾದ ಉಮಾನಾಥ ಶೆಟ್ಟಿ, ನವೀನ್ ಕುಮಾರ್ ಪದಬರಿ, ಉಪ ಪ್ರಾಂಶುಪಾಲರಾದ ಗಣೇಶ್ ರೈ, ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಸತ್ಯನಾರಾಯಣ, ದೈಹಿಕ ಶಿಕ್ಷಣ ಶಿಕ್ಷಕ ನಿತಿನ್, ಉಪನ್ಯಾಸಕಿ ಇಂದಿರಾ ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here