ಮೂಡುಬಿದಿರೆ : ಬಸ್ ತಂಗುದಾಣದ ಬಳಿ ವೃದ್ಧನ ಮೃತದೇಹ ಪತ್ತೆ

0
58

ಮೂಡುಬಿದಿರೆ : ತಾಲೂಕಿನ ಸರ್ಕಾರಿ ಆಸ್ಪತ್ರೆ ಬಸ್ ತಂಗುದಾಣದಲ್ಲಿ ಗುರುವಾರ ವೃದ್ಧನೊಬ್ಬರ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಬಸ್ ತಂಗುದಾಣದಲ್ಲಿ ವೃದ್ಧ ವ್ಯಕ್ತಿಯೊಬ್ಬರು ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ, ವೃದ್ಧ ಮೃತಪಟ್ಟಿರುವುದು ದೃಢಪಟ್ಟಿತು ಎಂದು ತಿಳಿದುಬಂದಿದೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಾವಿಗೆ ನಿಖರ ಕಾರಣವೇನು ಎಂಬುದು ಕೂಡ ತಿಳಿದುಬಂದಿಲ್ಲ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here