ಬೆಳ್ತಂಗಡಿ : ಅನುಮಾನಾಸ್ಪದ ಸಾವು – ಯುವಕನ ಮೃತದೇಹ ಪತ್ತೆ

0
46

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಯುವಕನೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿರುವ ಘಟನೆ ನಡೆದಿದೆ.

ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪದ ಯೆನಪೊಯ ವಿದ್ಯುತ್ ಸಬ್‌ಸ್ಟೇಷನ್ ಆವರಣದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ.

ಮುಸ್ತಾಕ್ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಘಟನೆ ಕುರಿತು ಪ್ರತಿಕ್ರಿಯಿಸಿರುವ ಮೃತನ ತಂದೆ ಶರೀಫ್, ತಮ್ಮ ಮಗನನ್ನು ಕೊಲೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದ ಕೂಡಲೇ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here