ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ)ಫ್ರೀಲಾನ್ಸ್ ಪತ್ರಕರ್ತರ ಸಂಘದ 41ನೇ ವರ್ಷಾಚರಣೆ,ರಾಜ್ಯಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ, ಕನ್ನಡ ಪತ್ರಿಕಾ ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ

0
12

ಮಂಗಳೂರಿನಲ್ಲಿ 1843 ಜುಲೈ 1 ರಂದು ಮಂಗಳೂರು ಸಮಾಚಾರ ಎಂಬ ಕನ್ನಡ ಪ್ರಥಮ ಪತ್ರಿಕೆಯು ಪ್ರಾರಂಭಗೊಂಡಿತ್ತು.ಈ ದಿನ ಕೇರಳ -ಕರ್ನಾಟಕ ಮಹಾರಾಷ್ಟ್ರ ರಾಜ್ಯದಾದ್ಯಂತ183 ನೇ ವರ್ಷದ ಕನ್ನಡ ಪತ್ರಿಕೋದ್ಯಮ ವರ್ಷಾಚರಣೆ, ಕನ್ನಡ ಪತ್ರಿಕಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಮಂಗಳೂರಿನಲ್ಲಿ ಕರ್ನಾಟಕ ಪತ್ರಿಕಾ ಅಕಾಡೆಮಿಯ ಆಶ್ರಯದಲ್ಲಿ ನಡೆದ ಕನ್ನಡ ಪತ್ರಿಕೋದ್ಯಮದ 142 ನೇ ವರ್ಷಾಚರಣೆಯ ಸಂದರ್ಭದಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯವ್ಯಾಪ್ತಿಯನ್ನು ಒಳಗೊಂಡು ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಫ್ರೀಲಾನ್ಸ್ ಪತ್ರಕರ್ತ ಶಿವರಾಮ ಕಾಸರಗೋಡು ಸಂಸ್ಥಾಪಕ ಅಧ್ಯಕ್ಷರಾಗಿ 1985 ಜುಲೈ 1ರಂದು ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘವನ್ನು ಅಂದಿನ ಕರ್ನಾಟಕ ಪತ್ರಿಕಾ ಅಕಾಡೆಮಿ ಅಧ್ಯಕ್ಷ ಜಿ.ನಾರಾಯಣ ಬೆಂಗಳೂರು ಉದ್ಘಾಟಿಸಿದರು.

ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ಜುಲೈ 1ರಂದು ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ ಕಾಸರಗೋಡು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ ಇದರ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಬೆಂಗಳೂರು ಇದರ ಸಹಯೋಗದಲ್ಲಿ 183 ನೇ ವರ್ಷದ ಕನ್ನಡ ಪತ್ರಿಕೋದ್ಯಮ ವರ್ಷಾಚರಣೆ, ರಾಜ್ಯ ಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ, ಕನ್ನಡ ಪತ್ರಿಕಾ ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಲೇಖಕ, ಪತ್ರಿಕಾ ಅಂಕಣಕಾರ, ಪ್ರಕಾಶಕ, ವಿಷ್ಣು ಕೆ.ಶ್ಯಾನುಭೋಗ್ ಕೂಡ್ಲು ವಹಿಸಿದ್ದರು.

ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಿಕೋದ್ಯಮ ನಡೆದು ಬಂದ ದಾರಿ- ಮತ್ತು ಇತಿಹಾಸದ ಕುರಿತು ವಿಶೇಷೋಪನ್ಯಾಸವನ್ನು ಕವಿ ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ನೀಡಿದರು.

ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಿಕಾ ವಿತರಕರಿಗೆ ಸನ್ಮಾನ, ನೂತನವಾಗಿ ಆಯ್ಕೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಶ್ರೀಕಾಂತ ಕಾಸರಗೋಡು, ಸಾಧಕರಾದ ಜಯಾನಂದ ಕುಮಾರ್ ಹೊಸದುರ್ಗ, ಕಾಸರಗೋಡು, ವಿಷ್ಣು ಕೆ. ಶ್ಯಾನುಭೋಗ್ ಕೂಡ್ಲು, ಗಣೇಶ್ ಪಾರೆಕಟ್ಟೆ ಅವರಿಗೆ ರಾಜ್ಯ ಮಟ್ಟದ ಕನ್ನಡ ಪತ್ರಿಕಾ ದಿನಾಚರಣೆಯ ಗೌರವ ಪ್ರಶಸ್ತಿಯನ್ನು ಶಾಲು,ಪ್ರಶಸ್ತಿ ಫಲಕದೊಂದಿಗೆ ನೀಡಿ ಅಭಿನಂದನೆ ಸಲ್ಲಿಸಲಾಯಿತು.

ಕಾಸರಗೋಡು,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕಟವಾಗುವ ಕನ್ನಡ ದಿನ ಪತ್ರಿಕೆಗಳ ಪ್ರದರ್ಶನವನ್ನು ಏರ್ಪಡಿಸಿ, ಕನ್ನಡ ಪತ್ರಿಕಾ ಪ್ರತಿಜ್ಞೆಯನ್ನು ರಂಗ ನಿರ್ದೇಶಕ, ಗಾಯಕ ದಿವಾಕರ ಪಿ.ಅಶೋಕ ನಗರ ಬೋಧಿಸಿದರು.

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7 ಮತ್ತು 8 ರಂದು ಐತಿಹಾಸಿಕ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ, ಕೇರಳ – ಕರ್ನಾಟಕ ಉತ್ಸವ, ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ, ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಾಗೂ ಕೇರಳ – ಕರ್ನಾಟಕ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಕಾಸರಗೋಡು ಕನ್ನಡ ಪತ್ರಿಕಾ ಮ್ಯೂಸಿಯಂ ಮತ್ತು ಸಾರ್ವಜನಿಕ ಸಂಪರ್ಕ – ಡಿಜಿಟಲ್ ಕನ್ನಡ ಪತ್ರಿಕಾ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗುವುದು. ಈಗಾಗಲೇ ಕಾಸರಗೋಡು ಜಿಲ್ಲೆಯಲ್ಲಿ ನೋoದಾವಣೆಗೊಂಡಿರುವ ವಾರ ಪತ್ರಿಕೆ, ಪಾಕ್ಷಿಕ ಪತ್ರಿಕೆ, ಮಾಸ ಪತ್ರಿಕೆಯ ಪ್ರಕಾಶಕರು, ಸಂಪಾದಕರನ್ನು ಗುರುತಿಸಿ ಪತ್ರಿಕೆಯನ್ನು ಪುನರ್ ಆರಂಭಿಸಲು ಚಿಂತನೆ ನಡೆಸಲಾಗುವುದು ಎಂದರು.

ಮುಖ್ಯ ಅತಿಥಿಯಾಗಿ ಪ್ರೊ. ಎ. ಶ್ರೀನಾಥ ಕಾಸರಗೋಡು ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ, ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ನಿರ್ದೇಶಕ ಕೆ. ವಿ. ರಮೇಶ ಕಾಸರಗೋಡು, ನಗರ ಸಭಾ ಮಾಜಿ ಕೌನ್ಸಿಲರ್ ಕೆ. ವರಪ್ರಸಾದ ಕೋಟೆಕಣಿ, ಕೆ. ಸಿ. ಎನ್ ಚಾನಲ್ ನಿರ್ದೇಶಕ ಪುರುಷೋತ್ತಮ ಎಂ. ನಾಯ್ಕ್ ಭಾಗವಹಿಸಿದ್ದರು.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ. ಜಗದೀಶ ಕೂಡ್ಲು ಸ್ವಾಗತಿಸಿದರು. ಕುಶಲ ಕುಮಾರ ಕೆ. ಕನ್ನಡ ಗ್ರಾಮ ಧನ್ಯವಾದ ನೀಡಿದರು. ಅನುಷಾ ಕೆ, ಕೃಪಾನಿಧಿ ಕೆ.ಕಾರ್ಯಕ್ರಮ ನಿರೂಪಿಸಿದರು.

ಕಾಸರಗೋಡು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಜಿಲ್ಲಾ ಪತ್ರಿಕೆಗಳಿಗೆ ಕಾರ್ಯನಿರತ ಪತ್ರಕರ್ತರಾಗಿ ಫ್ರೀಲಾನ್ಸ್ ಪತ್ರಕರ್ತರಾಗಿ, ಹವ್ಯಾಸಿ ಪತ್ರಕರ್ತರಾಗಿ ಅರೆಕಾಲಿಕ ವರದಿಗಾರನಾಗಿ, ನಿರಂತರವಾಗಿ ಪತ್ರಿಕಾ ಬರಹದ ಮೂಲಕ ಗುರುತಿಸಿಕೊಳ್ಳುವವರು ಹಾಗೂ ವಿವಿಧ ಸುದ್ದಿ ವಾಹಿನಿಗಳು, ಪತ್ರಿಕಾ ದೃಶ್ಯ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಫ್ರೀಲಾನ್ಸ್ ಪತ್ರಕರ್ತರು, ಮಾಧ್ಯಮ ಮಿತ್ರರು ಭಾಗವಹಿಸಿದ್ದರು. ಫ್ರೀಲಾನ್ಸ್ ಪತ್ರಕರ್ತರ ಸಂಘದ ಆಶ್ರಯದಲ್ಲಿ ಶೀಘ್ರದಲ್ಲಿ ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಿಕೆಗಳಿಗೆ ಪತ್ರಿಕಾ ವರದಿ, ಸುದ್ದಿಯನ್ನು ಕಳುಹಿಸುವ ಕುರಿತು ಪತ್ರಿಕಾ ಬರವಣಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು.

ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು, ಸಂಘಸಂಸ್ಥೆಗಳು, ಶಾಲಾ ಕಾಲೇಜುಗಳ ಆಧ್ಯಾಪಕರು, ವಿದ್ಯಾರ್ಥಿಗಳು, ಮಾಧ್ಯಮ ವಕ್ತಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here