ಜನಪ್ರಿಯ ವೈದ್ಯರೂ, ಪ್ರಸಿದ್ಧ ಸಾಹಿತಿಯೂ ಆಗಿರುವ ಡಾ. ಸುರೇಶ್ ನೆಗಳಗುಳಿ ಇವರು “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026″ಕ್ಕೆ ಆಯ್ಕೆ

0
35

ಕಾಸರಗೋಡು : ಡಾ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸಾರತ್ಯದ, ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಹಾಗೂ ವಾಮನ್ ರಾವ್ ಬೇಕಲ್ ಸ್ಥಾಪಿತ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ಜೂಲೈ 26.ಭಾನುವಾರ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ “ದಲ್ಲಿ ಅಪ್ರತಿಮ ಮುಕ್ತಕ ಕವಿ, ಸಾಹಿತಿ, ಹಿರಿಯ ಜನಪ್ರಿಯ ವೈದ್ಯರೂ ಆಗಿರುವ ಡಾ. ಸುರೇಶ್ ನೆಗಳಗುಳಿ ಇವರಿಗೆ ಸಮ್ಮೇಳನದಲ್ಲಿ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “ನೀಡಿ ಗೌರವಿಸಲಾಗುವುದು.

ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಾಕಾಂಕ್ಷಿ, ಮಾಜಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಆದ ಡಾ. ಸೋಮಶೇಖರ್ ಐ. ಎ. ಎಸ್. ಸರ್ವಾಧ್ಯಕ್ಷ ರಾಗಿರುವ ಈ ಬ್ರಿಹತ್ ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಗುವುದೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾಗಿರುವ ಡಾ. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ವಾಮನ್ ರಾವ್ ಬೇಕಲ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here