ಕಾಪು : ಶಿರ್ವ ಸಹಕಾರಿ ವ್ಯವಸಾಯಿಕ ಸಂಘ . ನಿ. ಶಿರ್ವ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ . ನಿ. ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ . ನಿ. ಇವರ ಜಂಟಿ ಸಹಯೋಗದಲ್ಲಿ ಕೇಂದ್ರ ಸರಕಾರದ ನೂತನ ಸಹಕಾರಿ ಇಲಾಖೆಗೆ ಐದು ವರ್ಷಗಳು ತುಂಬಿದ ನಿಟ್ಟಿನಲ್ಲಿ ನಡೆಯುತ್ತಿರುವ ವಿಶೇಷ ಸಹಕಾರ ಸಪ್ತಾಹದ ಅನ್ವಯ ಏಕ್ ಫೆಡ್ ಮಾ ಕೆ ನಾಮ್ ಘೋಷಣೆ ಯೊಂದಿಗೆ ಸ್ಥಳೀಯ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.

ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮವನ್ನು, ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರಾದ ಕೆ .ಆರ್.ಲಾವಣ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಅವರು ಪ್ರಧಾನ ಸಂದೇಶವನ್ನು ನೀಡಿದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ವೀರೇಂದ್ರ ಪಾಟ್ಕರ್,ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯಿನಿ ಸವಿತ ಅವರು ಉಪಸ್ತಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಸ್ವಾಗತಿಸಿದರು , ಪ್ರಧಾನ ಲೆಕ್ಕಿಗ ಹರೀಶ್ ಪೂಜಾರಿ ಅವರು ನಿರ್ವಹಿಸಿದ ಈ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಶಾಖಾ ವ್ಯವಸ್ಥಾಪಕಿ ಸುಮಾ ಶೆಟ್ಟಿ ತವರು ವಂದನಾರ್ಪಣೆಗೈದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್,ಸಂಘದ ನಿರ್ದೇಶಕರಾದ ವಾರಿಜಾ ಪೂಜಾರಿ, ಉಮೇಶ್ ಆಚಾರ್ಯ,ಹರಿಣಾಕ್ಷ ಶೆಟ್ಟಿ ಮತ್ತು ಗಣೇಶ ನಾಯಕ ಉಪಸ್ತಿತರಿದ್ದರು.
ಶಾಲಾಭಿವೃದ್ಧಿ ಸಮಿತಿಯ ಕಿಶೋರ್ ಶೆಟ್ಟಿ , ಸಾಯಿನಾಥ ಶೆಟ್ಟಿ, ಅಬೂಬಕ್ಕರ್ ಮತ್ತು ಗೀತಾನಾಯ್ಕ , ಶಾಲಾ ಶಿಕ್ಷಕಿಯರು ಮತ್ತು ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು ಮತ್ತು ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಣ್ಣು ಬಿಡುವ ಮರಗಳ ಗಿಡಗಳನ್ನು ವಿತರಿಸಲಾಯಿತು.

