2076ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

0
8

ಬಂಟ್ವಾಳ: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಯುತ್ತಿರುವ 2076ನೇ ಮದ್ಯವರ್ಜನ ಶಿಬಿರದ ಕೊನೆಯ ದಿನದಲ್ಲಿ ಕುಟುಂಬ ದಿನ ಕಾರ್ಯಕ್ರಮವನ್ನು ಶ್ರೀ ವಿವೇಕ್ ವಿ ಪಾಯಸ್ ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮದ್ಯಪಾನವನ್ನು ತ್ಯಜಿಸುವುದು ಎಂದರೆ ಕೇವಲ ಒಂದು ಕೆಟ್ಟ ಅಭ್ಯಾಸವನ್ನು ಬಿಡುವುದಲ್ಲ; ಅದು ಕುಟುಂಬದ ಮೇಲಿನ ಪ್ರೀತಿ, ಜವಾಬ್ದಾರಿ ಮತ್ತು ಕಾಳಜಿಯನ್ನು ವ್ಯಕ್ತಪಡಿಸುವ ಮಹತ್ವದ ನಿರ್ಧಾರವಾಗಿದೆ. ಮದ್ಯವಿಲ್ಲದ ಮನೆಯಲ್ಲಿ ಪ್ರೀತಿ ಹೆಚ್ಚುತ್ತದೆ, ಆರೋಗ್ಯ ಸುಧಾರಿಸುತ್ತದೆ, ಮಕ್ಕಳಿಗೆ ಉತ್ತಮ ವಾತಾವರಣ ದೊರೆಯುತ್ತದೆ ಮತ್ತು ಕುಟುಂಬದಲ್ಲಿ ಸಂತೋಷ ನೆಲೆಸುತ್ತದೆ ಎಂದು ಸಾಂಸಾರಿಕ ಜೀವನದ ಮಹತ್ವವನ್ನು ವಿವರಿಸಿದರು.

ಕುಟುಂಬ ದಿನ ಕಾರ್ಯಕ್ರಮದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಹರೀಂದ್ರ ಪೈ, ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಶೆಟ್ಟಿ , ಕೋಶಾಧಿಕಾರಿ ಶ್ರೀ ಅರುಣ್ ಕುಮಾರ್ ಇಂದ್ರ ಅಜ್ಜಿಬೆಟ್ಟು, ಕಾರ್ಯದರ್ಶಿ ಜಯಾನಂದ ಪಿ, ಉಪಾಧ್ಯಕ್ಷರಾದ ಶ್ರೀ ಪ್ರವೀಣ್ ಕಾಡಬೆಟ್ಟು ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಪದ್ಮಾವತಿ ಸಭಾಭವನ ಬಸ್ತಿಕೋಡಿ ವಾಮದಪದವು ಇಲ್ಲಿ ನಡೆದ ಮದ್ಯವರ್ಜನ ಶಿಬಿರದಲ್ಲಿ 63 ಜನ ಪಾನಮುಕ್ತರಾಗಿ ಹೊಸ ಜೀವನಕ್ಕೆ ಕಾಲಿಟ್ಟರು

LEAVE A REPLY

Please enter your comment!
Please enter your name here