ಶಿವಮೊಗ್ಗ: ಜಿಲ್ಲೆಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್ ಕರೆ ನೀಡಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗವು ಹಮ್ಮಿಕೊಂಡಿದ್ದ ‘ಎಸ್ಐಆರ್’ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ತರಬೇತಿಯಲ್ಲಿನ ವಿಚಾರಗಳನ್ನು ಅರಿತು, ಬಿಎಲ್‌ಎಗಳ ಜೊತೆಗೂಡಿ ಯಾವುದೇ ಮತದಾರನೂ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾಧ್ಯಕ್ಷ ಎಂ. ರಮೇಶ್ ಶಂಕರಘಟ್ಟ ತರಬೇತಿ ನೀಡಿ, ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪ್ರತಿ ಬೂತ್‌ನಲ್ಲಿ ನೂರಕ್ಕೆ ನೂರರಷ್ಟು ಮತ ಪರಿಷ್ಕರಣೆ ಯಶಸ್ವಿಗೊಳಿಸಲು ತಿಳಿಸಿದರು. ಶಿಬಿರದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಉಮಾಪತಿ, ರಾಜ್ಯ ಸಂಯೋಜಕ ಜಿ.ಡಿ. ಮಂಜುನಾಥ್ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂದಾರ ರಾಜೇಶ್ ಭಟ್

